ಪ್ರಶಾಂತ್ ಕಿಶೋರ್ online desk
ದೇಶ

ಮೊದಲ ಹಂತದ ಮತದಾನಕ್ಕೂ ಮುನ್ನವೇ ಪ್ರಶಾಂತ್ ಕಿಶೋರ್ ಗೆ ಭಾರೀ ಹಿನ್ನಡೆ: ಜನ್ ಸುರಾಜ್ ಪಕ್ಷದ ಅಭ್ಯರ್ಥಿ BJP ಸೇರ್ಪಡೆ

ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರದ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಿಂಗ್ ಹೇಳಿದರು. ನಾನು ಎನ್‌ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದ್ದೇನೆ.

ಪಾಟ್ನಾ: ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನೆಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಅಂದರೆ ಬುಧವಾರ ಜನ್ ಸುರಾಗ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ.

ಮುಂಗೇರ್‌ನಲ್ಲಿ ಜೆಎಸ್‌ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್‌ಪಿಯ ಅಭ್ಯರ್ಥಿಗಳ ಸಂಖ್ಯೆ ಈಗ ನಾಲ್ಕರಷ್ಟು ಕಡಿಮೆಯಾಗಿದೆ, ಈ ಹಿಂದೆಯು ದಾನಾಪುರ, ಬ್ರಹ್ಮಪುರ ಮತ್ತು ಗೋಪಾಲ್‌ಗಂಜ್‌ ಅಭ್ಯರ್ಥಿಗಳು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.

ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರದ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಿಂಗ್ ಹೇಳಿದರು. ನಾನು ಎನ್‌ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದ್ದೇನೆ. ಬಹು ದೊಡ್ಡ ಅಂತರದಿಂದ ಅವರ ಗೆಲುವಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.

ಸಿಂಗ್ ಪಕ್ಷ ಬದಲಾವಣೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, "ನಿಜವಾದ ಬದಲಾವಣೆ" ತರಲು ಅಗತ್ಯವಿರುವ ಬಲವಾದ ನಾಯಕತ್ವವನ್ನು ಜೆಎಸ್‌ಪಿ ಒದಗಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

SCROLL FOR NEXT