ಸಾಂದರ್ಭಿಕ ಚಿತ್ರ 
ದೇಶ

ಅಮ್ಮ-ಅಪ್ಪ, ದಯವಿಟ್ಟು ಕ್ಷಮಿಸಿ: ತುಂಬಾ ಒತ್ತಡದಲ್ಲಿದ್ದೇನೆ, ನಿಮ್ಮ ಕನಸು ಈಡೇರಿಸಲು ಸಾಧ್ಯವಿಲ್ಲ; ಡೆತ್ ನೋಟ್ ಬರೆದು ನೀಟ್ ಆಕಾಂಕ್ಷಿ ಆತ್ಮಹತ್ಯೆ

ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, "ಅಮ್ಮ ಮತ್ತು ಅಪ್ಪ, ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ತುಂಬಾ ಒತ್ತಡದಲ್ಲಿದ್ದೇನೆ, ನಾನು ನಿಮ್ಮ ಕನಸುಗಳನ್ನು ಈಡೇರಿಸಲು ಸಾಧ್ಯವಿಲ್ಲ,

ಉತ್ತರ ಪ್ರದೇಶ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ವಿದ್ಯಾರ್ಥಿಯೊಬ್ಬ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ರಾಂಪುರ ನಿವಾಸಿ ಮೊಹಮ್ಮದ್ ಆನ್ ಮೃತ ವಿದ್ಯಾರ್ಥಿ. ನಾಲ್ಕು ದಿನಗಳಿಂದ ರಾವತ್‌ಪುರದ ಹಾಸ್ಟೆಲ್‌ನಲ್ಲಿ ತಂಗಿದ್ದ. ಆತನ ರೂಮ್‌ಮೇಟ್ ಇಮ್ದಾದ್ ಹಸನ್ ಶುಕ್ರವಾರ ಮಧ್ಯಾಹ್ನ ಪ್ರಾರ್ಥನೆಗೆ ಹೋಗುವಂತೆ ಹೇಳಿದ್ದ. ಆದರೆ, ಮೊಹಮ್ಮದ್ ನಿರಾಕರಿಸಿದ್ದನು. ಇಮ್ದಾದ್ ಪ್ರಾರ್ಥನೆಗೆ ಹೋಗಿ ಹಿಂತಿರುಗಿದಾಗ, ಹಾಸ್ಟೆಲ್ ರೂಂ ಒಳಗಿನಿಂದ ಲಾಕ್ ಆಗಿತ್ತು.

ಮೊಹಮ್ಮದ್‌ಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಬಾಗಿಲು ಒಡೆದು ನೋಡಿದಾಗ ಮೊಹಮ್ಮದ್ ಸೀಲಿಂಗ್ ಫ್ಯಾನ್‌ ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.

ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, "ಅಮ್ಮ ಮತ್ತು ಅಪ್ಪ, ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ತುಂಬಾ ಒತ್ತಡದಲ್ಲಿದ್ದೇನೆ, ನಾನು ನಿಮ್ಮ ಕನಸುಗಳನ್ನು ಈಡೇರಿಸಲು ಸಾಧ್ಯವಿಲ್ಲ, ಹೀಗಾಗಿ ನನ್ನ ಪ್ರಾಣವನ್ನು ತೆಗೆದುಕೊಳ್ಳುತ್ತಿದ್ದೇನೆ, ಇದಕ್ಕೆ ನಾನೇಹೊಣೆ ಎಂದು ಬರೆಯಲಾಗಿದೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವಿದ್ಯಾರ್ಥಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Gujarat: ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸ್ಕೆಚ್; ಡಾಕ್ಟರ್ ಸೇರಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ ಗುಜರಾತ್ ATS!

ಸರಗೂರು: ಮನುಷ್ಯರ, ದನಗಳ ಕೊಂದಿದ್ದ ಹುಲಿ ಕೊನೆಗೂ ಸೆರೆ; ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?

ಬೆಂಗಳೂರು ದಕ್ಷಿಣ: ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ 2 ಕಾಡಾನೆ ಸಾವು

Devi Awards 2025: ಕನಸು, ಶ್ರಮ, ಪ್ರಶಸ್ತಿ; ದೇವಿ ಪ್ರಶಸ್ತಿ 2025 ಪುರಸ್ಕೃತರ ಮನದಾಳದ ಮಾತುಗಳು!

'ಯುದ್ಧ ಭುಗಿಲೆದ್ದರೆ ನಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ನಮಗಿದೆ': ಆಫ್ಘಾನಿಸ್ತಾನ, ಪಾಕಿಸ್ತಾನ ಜೊತೆ ಶಾಂತಿ ಮಾತುಕತೆ ಮತ್ತೆ ವಿಫಲ

SCROLL FOR NEXT