ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಜೈಲಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಕಾನ್‌ಸ್ಟೆಬಲ್ ರಾಮ್‌ಕಿಶೋರ್ ಮೋದಿವಾಲ್(37) ಅವರು ಜೈಲು ಆವರಣದೊಳಗಿನ ಕಾವಲು ಗೋಪುರದಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೈಪುರ: ರಾಜಸ್ಥಾನದ ಭಿಲ್ವಾರಾ ಜಿಲ್ಲಾ ಜೈಲಿನಲ್ಲಿ ಶನಿವಾರ ತಡರಾತ್ರಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಒಬ್ಬ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ ಸಶಸ್ತ್ರ ಕಾನ್‌ಸ್ಟೆಬ್ಯುಲರಿಯ(ಆರ್‌ಎಸಿ) 13ನೇ ಬೆಟಾಲಿಯನ್‌ನ ಕಾನ್‌ಸ್ಟೆಬಲ್ ರಾಮ್‌ಕಿಶೋರ್ ಮೋದಿವಾಲ್(37) ಅವರು ಜೈಲು ಆವರಣದೊಳಗಿನ ಕಾವಲು ಗೋಪುರದಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನ್ನ ಶಿಫ್ಟ್ ಮುಗಿಯುವ ಸ್ವಲ್ಪ ಸಮಯ ಮೊದಲು, ಅವರು ತಮ್ಮ ಸರ್ವಿಸ್ ರೈಫಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. "ರಾಮ್‌ಕಿಶೋರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ" ಎಂದು ಜೈಲು ಸೂಪರಿಂಟೆಂಡೆಂಟ್ ಶೈಲೇಂದ್ರ ಸಿಂಗ್ ಫೌಜ್‌ದಾರ್ ಅವರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಮತ್ತೊಬ್ಬ ಕಾನ್‌ಸ್ಟೆಬಲ್ ಬಾಬುಲಾಲ್ ಅವರನ್ನು ಸಮಾಧಾನಪಡಿಸಲು ಆಗಮಿಸಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ತಕ್ಷಣ ಜೈಲು ಆಡಳಿತಕ್ಕೆ ಮಾಹಿತಿ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಕೊತ್ವಾಲಿ ಪೊಲೀಸ್ ಠಾಣೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್) ತಂಡ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿತು.

ಶವವನ್ನು ವಿಡಿಯೋ ಚಿತ್ರೀಕರಣ ಮಾಡಿ ನಂತರ ಮರಣೋತ್ತರ ಪರೀಕ್ಷೆಗಾಗಿ ಮಹಾತ್ಮ ಗಾಂಧಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.

ರಾಮ್‌ಕಿಶೋರ್ ಅವರ ಸಹೋದರ ನನುರಾಮ್(40) ಅವರು ಈ ಸಂಬಂಧ ಭಾನುವಾರ ಬೆಳಗ್ಗೆ ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಾವು ಅನುಮಾನಾಸ್ಪದವಾಗಿದೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!