ಖುಷ್ಬೂ ಅಹಿರ್ವಾರ್ 
ದೇಶ

ಭೋಪಾಲ್‌ನಲ್ಲಿ ರೂಪದರ್ಶಿ ಅನುಮಾನಾಸ್ಪದ ಸಾವು: ಲಿವ್-ಇನ್ ಸಂಗಾತಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಖಾಸಿಂ ಪರಾರಿ!

ರಾಜ್ಯ ರಾಜಧಾನಿ ಭೋಪಾಲ್‌ನಲ್ಲಿ ಮಹಿಳಾ ಮಾಡೆಲ್ ಒಬ್ಬರು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆ ತನ್ನ ಗೆಳೆಯನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಸೋಮವಾರ ಮುಂಜಾನೆ, ಆಕೆಯ ಲಿವ್-ಇನ್ ಸಂಗಾತಿ ಆಕೆಯನ್ನು...

ಭೋಪಾಲ್: ರಾಜ್ಯ ರಾಜಧಾನಿ ಭೋಪಾಲ್‌ನಲ್ಲಿ ಮಹಿಳಾ ಮಾಡೆಲ್ ಒಬ್ಬರು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಮೃತ ಮಹಿಳೆ ತನ್ನ ಗೆಳೆಯನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಸೋಮವಾರ ಮುಂಜಾನೆ, ಆಕೆಯ ಲಿವ್-ಇನ್ ಸಂಗಾತಿ ಆಕೆಯನ್ನು ಭೈನ್ಸಖೇಡಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆಗೆ ನಡೆಯುತ್ತಿದೆ. ಲಿವ್-ಇನ್ ಸಂಗಾತಿಯನ್ನು ಖಾಸಿಂ ಎಂದು ಹೇಳಲಾಗಿದೆ.

ಖಜುರಿ ಸಡಕ್ ಪೊಲೀಸ್ ಠಾಣೆಯ ಪ್ರಕಾರ, ಮೃತಳನ್ನು ಖುಷ್ಬೂ ಅಹಿರ್ವಾರ್, ಅಲಿಯಾಸ್ ಖುಷಿ ವರ್ಮಾ (27) ಎಂದು ಗುರುತಿಸಲಾಗಿದೆ. ಅವರು ಕಳೆದ ಮೂರು ವರ್ಷಗಳಿಂದ ಭೋಪಾಲ್‌ನಲ್ಲಿ ವಾಸಿಸುತ್ತಿದ್ದು ಮಾಡೆಲಿಂಗ್ ಮಾಡುತ್ತಿದ್ದರು. ಖುಷ್ಬೂ ತನ್ನ ಬಿಎ ಅಧ್ಯಯನವನ್ನು ಬಿಟ್ಟು ಸ್ಥಳೀಯ ಬ್ರ್ಯಾಂಡ್‌ಗಳಿಗೆ ಮಾಡೆಲಿಂಗ್ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಅವರು "ಡೈಮಂಡ್ ಗರ್ಲ್" ಎಂಬ ಅಡ್ಡಹೆಸರಿನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದು ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 12,000 ಫಾಲೋವರ್ಸ್ ಹೊಂದಿದ್ದರು.

ಘಟನೆಯ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಏತನ್ಮಧ್ಯೆ, ಮೃತಳ ಕುಟುಂಬವು ಕೊಲೆ ಎಂದು ಆರೋಪಿಸಿ ನ್ಯಾಯಕ್ಕಾಗಿ ಒತ್ತಾಯಿಸಿದೆ. ಮೃತಳ ತಾಯಿ ಲಕ್ಷ್ಮಿ ಅಹಿರ್ವಾರ್, ತನ್ನ ಮಗಳ ದೇಹದ ಮೇಲೆ ಮುಖ, ಭುಜ ಮತ್ತು ಖಾಸಗಿ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಖುಷ್ಬೂ ಅವರನ್ನು ಕ್ರೂರವಾಗಿ ಥಳಿಸಿ ಕೊಲ್ಲಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi ಸ್ಫೋಟ: ತನಿಖೆಗೆ ಕೈಜೋಡಿಸುವಂತೆ NIA, NSGಗೆ ಅಮಿತ್ ಶಾ ಆದೇಶ; ಕಾರು ಮಾಲೀಕ ವಶಕ್ಕೆ

Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 13 ಸಾವು, 17 ಜನರಿಗೆ ಗಾಯ; ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ, Video!

Delhi Blast: ಘಟನಾ ಸ್ಥಳದಲ್ಲಿ ಪೊಲೀಸರಿಗೆ ಮಹತ್ವದ ಸುಳಿವು ಪತ್ತೆ; ತನಿಖೆ ಆಯಾಮವೇ ಬದಲು!

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

SCROLL FOR NEXT