ಪ್ರಧಾನಿ ಮೋದಿ (ಸಂಗ್ರಹ ಚಿತ್ರ) 
ದೇಶ

Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

ರಾಷ್ಟ್ರ ರಾಜಧಾನಿಯಲ್ಲಿನ ಭೀಕರ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದರು.

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಕಾರು ಸ್ಫೋಟಗೊಂಡು 10ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿನ ಭೀಕರ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದರು ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ತೀವ್ರ ಸ್ಫೋಟದಲ್ಲಿ ಕಾರು ಛಿದ್ರಗೊಂಡು ಹಲವಾರು ವಾಹನಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ಸಂಭವಿಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ ಮತ್ತು ಇದು ಉಗ್ರರ ಕೃತ್ಯ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; ಕನಿಷ್ಠ 8 ಸಾವು, 20 ಜನರಿಗೆ ಗಾಯ; ದೆಹಲಿಯಲ್ಲಿ ಹೈ ಅಲರ್ಟ್; Video

Delhi ಸ್ಫೋಟ: ತನಿಖೆಗೆ ಕೈಜೋಡಿಸುವಂತೆ NIA, NSGಗೆ ಅಮಿತ್ ಶಾ ಆದೇಶ; ಕಾರು ಮಾಲೀಕ ವಶಕ್ಕೆ

Delhi ಕೆಂಪುಕೋಟೆ ಬಳಿ ಕಾರು ಸ್ಫೋಟ; ಬೆಂಗಳೂರಿನಲ್ಲೂ ತೀವ್ರ ಕಟ್ಟೆಚ್ಚರ; ಗಸ್ತು, ತಪಾಸಣೆ ಹೆಚ್ಚಿಸಲು ಸೂಚನೆ

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

Delhi Blast: ಘಟನಾ ಸ್ಥಳದಲ್ಲಿ ಪೊಲೀಸರಿಗೆ ಮಹತ್ವದ ಸುಳಿವು ಪತ್ತೆ; ತನಿಖೆ ಆಯಾಮವೇ ಬದಲು!

SCROLL FOR NEXT