ರಾಹುಲ್ ಗಾಂಧಿ 
ದೇಶ

ನವದೆಹಲಿ: ಶುದ್ಧ ಗಾಳಿಗಾಗಿ ಒತ್ತಾಯ; ಪ್ರತಿಭಟನಾಕಾರರ ಬಂಧನ; ನಾಗರಿಕರನ್ನು ಅಪರಾಧಿಗಳಂತೆ ನೋಡಲಾಗುತ್ತಿದೆ- ರಾಹುಲ್ ಕಿಡಿ

ಶುದ್ಧ ಗಾಳಿಯನ್ನು ಕೇಳುತ್ತಿರುವ ನಾಗರಿಕರ ಮೇಲೆ ದಾಳಿ ಮಾಡುವ ಬದಲು ವಾಯು ಮಾಲಿನ್ಯದ ಬಗ್ಗೆ ಇದೀಗ" ನಿರ್ಣಾಯಕ ಕ್ರಮ ಅಗತ್ಯವಾಗಿದೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹದಗೆಟ್ಟ ವಾಯು ಗುಣಮಟ್ಟ ಬಗ್ಗೆ ಪ್ರತಿಭಟನೆ ನಡೆಸಿದವರನ್ನು ಬಂಧಿಸಿದ್ದಕ್ಕಾಗಿ ಸರ್ಕಾರದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಶುದ್ಧ ಗಾಳಿಗಾಗಿ ಒತ್ತಾಯಿಸಿ ಶಾಂತಿಯುತವಾಗಿ ಒತ್ತಾಯಿಸುತ್ತಿರುವ ನಾಗರಿಕರನ್ನು ಯಾಕೆ ಅಪರಾಧಿಗಳಂತೆ ನೋಡಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಶುದ್ಧ ಗಾಳಿಯನ್ನು ಕೇಳುತ್ತಿರುವ ನಾಗರಿಕರ ಮೇಲೆ ದಾಳಿ ಮಾಡುವ ಬದಲು ವಾಯು ಮಾಲಿನ್ಯದ ಬಗ್ಗೆ ಇದೀಗ" ನಿರ್ಣಾಯಕ ಕ್ರಮ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಶುದ್ಧ ಗಾಳಿಗಾಗಿ ಇಂಡಿಯಾ ಗೇಟ್ ನಲ್ಲಿ ಪ್ರತಿಭಟಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಕರೆದುಕೊಂಡು ಹೋಗಿ ಬಸ್ ಹತ್ತಿಸಿದರು ಎಂದು ಪರಿಸರವಾದಿ ವಿಮಲೇಂದು ಝಾ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಶುದ್ಧ ಗಾಳಿಗಾಗಿ ಶಾಂತಿಯುತವಾಗಿ ಬೇಡಿಕೆ ಇಟ್ಟಿದ್ದ ನಾಗರಿಕರನ್ನು ಅಪರಾಧಿಗಳಂತೆ ಯಾಕೆ ನೋಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಶುದ್ಧ ಗಾಳಿಯು ಮನುಷ್ಯನ ಮೂಲಭೂತ ಹಕ್ಕು ಆಗಿದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನವು ಖಾತ್ರಿಪಡಿಸುತ್ತದೆ ಎಂದು ಅವರು ಎಕ್ಸ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್