ಹೈದರಾಬಾದ್: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
ತೆಲಂಗಾಣ ರಾಜಧಾನಿ ಹೈದರಾಬಾದ್ ನ ಮೈಲಾರದೇವಪಲ್ಲಿಯಲ್ಲಿ ಈ ಘಟನೆ ನಡೆದಿದ್ದು ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಮರಳು ಸಾಗಾಣಿಕಾ ಲಾರಿ ಹರಿದಿದೆ. ಈ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು 8 ವರ್ಷದ ಸೈಯದ್ ರಿಯಾನುದ್ದೀನ್ ಎಂದು ಹೇಳಲಾಗಿದ್ದು, ಇಲ್ಲಿನ ಶಾಸ್ತ್ರಿಪುರಂನಲ್ಲಿ ಬಾಲಕ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ತಿರುವಿನಲ್ಲಿ ಲಾರಿ ಹರಿದು ಬಾಲಕ ಮೃತಪಟ್ಟಿದ್ದಾನೆ.
ಬಾಲಕ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಹಠಾತ್ತನೆ ಯು-ಟರ್ನ್ ತೆಗೆದುಕೊಂಡಿದೆ. ಈ ವೇಳೆ ಬಾಲಕ ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಬಳಿಕ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.