ದೇಶ

Red Fort blast- ಸಾವಿನ ಸಂಖ್ಯೆ 12ಕ್ಕೆ ಏರಿಕೆ, Hyundai i20 ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿ ಪುಲ್ವಾಮಾ ವೈದ್ಯ

ದೆಹಲಿ ಪೊಲೀಸರು ಅನೇಕ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ.

ನವದೆಹಲಿ: ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿದ್ದ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ನಿನ್ನೆ ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿ ಅಪಘಾತ ಸಂಭವಿಸಿದೆ. ನಿನ್ನೆ ರಾತ್ರಿಯವರೆಗೆ, ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟು 20 ಜನರು ಗಾಯಗೊಂಡಿದ್ದರು.

ಇಂದು ಇನ್ನೂ ಮೂವರು ಮೃತಪಟ್ಟು, ಸಾವಿನ ಸಂಖ್ಯೆ 12 ಕ್ಕೆ ತಲುಪಿದೆ. ಮಾರಕ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಂದು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ದೆಹಲಿ ಪೊಲೀಸರು ಅನೇಕ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ.

ಫರಿದಾಬಾದ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಸಂಗ್ರಹ ಪತ್ತೆ

ಫರಿದಾಬಾದ್‌ನಲ್ಲಿರುವ ಕಾಶ್ಮೀರಿ ವೈದ್ಯರೊಬ್ಬರ ಎರಡು ಬಾಡಿಗೆ ಕೊಠಡಿಗಳಿಂದ 2,900 ಕೆಜಿ ಸ್ಫೋಟಕಗಳು ಮತ್ತು ದಹನಕಾರಿ ವಸ್ತುಗಳು ಪತ್ತೆಯಾಗಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯಾಪಕವಾದ ತನಿಖೆ ಮತ್ತು ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

ಕಾಶ್ಮೀರಿ ವೈದ್ಯರು ಕಳೆದ ಮೂರುವರೆ ವರ್ಷಗಳಿಂದ ವಾಸಿಸುತ್ತಿದ್ದ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಒಂದು ತಂಡ ಮೊಕ್ಕಾಂ ಹೂಡಿದ್ದು, ಇಲ್ಲಿನ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ವೈದ್ಯರನ್ನು ವಿಚಾರಣೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮಿತ್ ಶಾ ಅವರ ನಿವಾಸದಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ

ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್, ಗುಪ್ತಚರ ಬ್ಯೂರೋದ ನಿರ್ದೇಶಕರು, ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರು ಮತ್ತು ದೆಹಲಿ ಪೊಲೀಸ್ ಆಯುಕ್ತರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ದೆಹಲಿ ಪೊಲೀಸರು ಯುಎಪಿಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ರಾಷ್ಟ್ರ ರಾಜಧಾನಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಫರಿದಾಬಾದ್‌ನಲ್ಲಿ ಪತ್ತೆಯಾದ ಭಯೋತ್ಪಾದಕ ಘಟಕಕ್ಕೆ ಸಂಬಂಧವಿದೆ ಎಂದು ಪ್ರಾಥಮಿಕ ಸಂಶೋಧನೆಗಳು ಸೂಚಿಸಿವೆ.

ದೆಹಲಿ ಪೊಲೀಸರು ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಕಾಯ್ದುಕೊಳ್ಳಲಾಗಿದೆ.

ಪುಲ್ವಾಮಾ ವೈದ್ಯ ಕಾರು ಚಾಲಕ

ಮೂಲಗಳ ಪ್ರಕಾರ, ಪುಲ್ವಾಮಾ ನಿವಾಸಿ ಮತ್ತು ವೈದ್ಯ ಉಮರ್ ಮೊಹಮ್ಮದ್, ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದ ಬಳಿ ಸ್ಫೋಟಕ್ಕೆ ಬಳಸಲಾದ ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿಯ ಮೊದಲ ಚಿತ್ರವು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಫರಿದಾಬಾದ್‌ನಲ್ಲಿನ ಭಯೋತ್ಪಾದಕ ಘಟಕದೊಂದಿಗೆ ಆತನಿಗೆ ಸಂಪರ್ಕವಿದೆ ಎಂದು ಹೇಳಲಾಗಿದ್ದು, ಅಲ್ಲಿ ಸ್ಫೋಟಕ ವಸ್ತುಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಸ್ಫೋಟದಲ್ಲಿ ಅಮೋನಿಯಂ ನೈಟ್ರೇಟ್, ಇಂಧನ ತೈಲ ಮತ್ತು ಡಿಟೋನೇಟರ್‌ಗಳನ್ನು ಬಳಸಿರಬಹುದು ಎಂದು ಪೊಲೀಸರ ಪ್ರಾಥಮಿಕ ಸಂಶೋಧನೆಗಳು ಸೂಚಿಸುತ್ತವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 360 ಕೆಜಿ ಅಮೋನಿಯಂ ನೈಟ್ರೇಟ್ ವಶಪಡಿಸಿಕೊಂಡ ಫರಿದಾಬಾದ್ ಭಯೋತ್ಪಾದಕ ಘಟಕಕ್ಕೂ ದೆಹಲಿ ಸ್ಫೋಟಕ್ಕೂ ಸಂಭವನೀಯ ಸಂಬಂಧವಿದೆ ಎಂದು ಪ್ರಾಥಮಿಕ ಸಂಶೋಧನೆಗಳು ಸೂಚಿಸುತ್ತವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಂತಿಮ ವರದಿಗಳಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟಗೊಂಡ ಕಾರಿನ ಸಿಸಿಟಿವಿ ದೃಶ್ಯಾವಳಿಯಲ್ಲಿ ಮಾಸ್ಕ್ ಧರಿಸಿದ ವ್ಯಕ್ತಿ ಕಾರನ್ನು ಚಲಾಯಿಸುತ್ತಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಂಪು ಕೋಟೆಯ ಸುತ್ತಮುತ್ತಲಿನ ಮತ್ತು ಪಕ್ಕದ ಮಾರ್ಗಗಳಿಂದ ಸಿಸಿಟಿವಿಯನ್ನು ಸ್ಕ್ಯಾನ್ ಮಾಡಲು ಬಹು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ ಪರಿಶೀಲನಾ ಸಭೆ ನಡೆಸಲಿರುವ ಗೃಹ ಸಚಿವ ಅಮಿತ್ ಶಾ, ಸ್ಫೋಟದ ನಂತರ ಉನ್ನತ ಭದ್ರತಾ ಅಧಿಕಾರಿಗಳೊಂದಿಗೆ ಸ್ಫೋಟದ ಕುರಿತು ವಿವರವಾದ ವಿಶ್ಲೇಷಣೆ ನಡೆಸುವುದಾಗಿ ಹೇಳಿದ್ದರು.

ದೆಹಲಿಯಲ್ಲಿ ಸ್ಫೋಟ ಸಂಭವಿಸುವ ಗಂಟೆಗಳ ಮೊದಲು, ಮೂವರು ವೈದ್ಯರು ಸೇರಿದಂತೆ ಎಂಟು ಜನರನ್ನು ವಶಕ್ಕೆ ಪಡೆಯಲಾಯಿತು. ಫರಿದಾಬಾದ್‌ನಲ್ಲಿ ಪತ್ತೆಯಾಗಿರುವ 2,900 ಕೆಜಿ ಸ್ಫೋಟಕ ವಸ್ತುಗಳಲ್ಲಿ ಅಮೋನಿಯಂ ನೈಟ್ರೇಟ್, ಪೊಟ್ಯಾಸಿಯಮ್ ನೈಟ್ರೇಟ್ ಮತ್ತು ಸಲ್ಫರ್ ಸೇರಿವೆ. ಇದರಲ್ಲಿ 360 ಕೆಜಿ ಬೆಂಕಿ ಹಚ್ಚುವ ವಸ್ತು, ಶಂಕಿತ ಅಮೋನಿಯಂ ನೈಟ್ರೇಟ್ ಮತ್ತು ಕೆಲವು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೃತ್ತಿಯಲ್ಲಿ ವೈದ್ಯನಾಗಿರುವ ಉಮರ್ ಮೊಹಮ್ಮದ್, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಮಾಡ್ಯೂಲ್‌ನೊಂದಿಗೆ ಸಂಬಂಧ ಹೊಂದಿದ್ದರು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ತಾರಿಕ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಹುಂಡೈ ಐ20 ಕಾರನ್ನು ಉಮರ್ ಮೊಹಮ್ಮದ್‌ಗೆ ನೀಡಿರುವುದಾಗಿ ಹೇಳಲಾಗಿದೆ.

ಆರೋಪ ನಿರಾಕರಿಸಿದ ಕುಟುಂಬಸ್ಥರು

ಬಂಧಿಸಲ್ಪಟ್ಟ ಡಾ. ಮುಜಮ್ಮಿಲ್ ಗನೈ ಅವರ ಕುಟುಂಬವು, ಭಯೋತ್ಪಾದನಾ ಚಟುವಟಿಕೆಗಳಲ್ಲಿ ವೈದ್ಯ ಭಾಗಿಯಾಗಿರುವ ಆರೋಪ ನಿರಾಕರಿಸಿದೆ.

"ಅವರು ದೊಡ್ಡ ಭಯೋತ್ಪಾದಕ ಎಂದು ಹೇಳಲಾಗುತ್ತಿದೆ. ಅದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಕಳೆದ ಐದು ದಶಕಗಳಿಂದ, ನಮ್ಮ ಕುಟುಂಬದಿಂದ ಯಾರ ವಿರುದ್ಧವೂ ಯಾವುದೇ ಪ್ರಕರಣ ದಾಖಲಾಗಿಲ್ಲ" ಎಂದು ಮುಜಮ್ಮಿಲ್ ಅವರ ಸಹೋದರ ಆಜಾದ್ ಶಕೀಲ್ ತಮ್ಮ ಪುಲ್ವಾಮಾ ನಿವಾಸದಲ್ಲಿ ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಕೃಷಿಕರಾಗಿರುವ ತಮ್ಮ ಕುಟುಂಬವು ಹಿಂದೆ ಕಲ್ಲು ತೂರಾಟಗಾರರ ಗುರಿಯಾಗಿತ್ತು ಎಂದು ಶಕೀಲ್ ಹೇಳಿದರು. ನಾವು ಸಂಪೂರ್ಣವಾಗಿ ಭಾರತೀಯರು, ಭಾರತಕ್ಕಾಗಿ ದಾಳಿಗೊಳಗಾಗಿದ್ದೆವು. ಈ ಈ ಊರಿನ ಜನರಲ್ಲಿ ಬೇಕಾದರೆ ಕೇಳಿ ಎಂದರು.

ಭಾನುವಾರ ನಡೆಯಬೇಕಿದ್ದ ತನ್ನ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ತನ್ನ ಸಹೋದರ ಮನೆಗೆ ಬಂದಿದ್ದ ಎಂದು ಶಕೀಲ್ ಹೇಳಿದ್ದಾರೆ, ಆದರೆ ಈಗ ಮದುವೆ ರದ್ದಾಗಿದೆ. ಆರೋಪಿ ವೈದ್ಯರು ಈ ಹಿಂದೆ ಕಾಶ್ಮೀರಕ್ಕೆ ಭೇಟಿ ನೀಡಿದ್ದಾಗ ಆತನ ತಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಶಕೀಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಬಂಧಿತ ವೈದ್ಯೆಗೆ 'ಜೈಶ್ ಇ ಮಹಮದ್' ಉಗ್ರ ಸಂಘಟನೆಯ ಮಹಿಳಾ ಘಟಕ ಸ್ಥಾಪನೆ 'ಟಾಸ್ಕ್': ವರದಿ

Delhi Blast: 'ಶಂಕಿತ ಆತ್ಮಹತ್ಯಾ ಬಾಂಬರ್ ಟೆಲಿಗ್ರಾಮ್‌ನಲ್ಲಿ ಮೂಲಭೂತವಾದಿ ವೈದ್ಯರ ಗುಂಪಿನ ಭಾಗವಾಗಿದ್ದ'; ಯಾರೀತ? ಇಲ್ಲಿದೆ ಮಾಹಿತಿ..

Ranji Trophy 2025-26: ಮಿಂಚಿದ ಕನ್ನಡಿಗರು, ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭಾರಿ ಮುನ್ನಡೆ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ನಿರ್ಗಮಿಸಿದ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌, ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

ದೆಹಲಿ ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್

SCROLL FOR NEXT