ಪ್ರಧಾನಿ ನರೇಂದ್ರ ಮೋದಿ  
ದೇಶ

ಜಲವಿದ್ಯುತ್ ಯೋಜನೆ ಉದ್ಘಾಟನೆ: ಭೂತಾನ್ ಗೆ ತೆರಳಿದ ಪ್ರಧಾನಿ ಮೋದಿ

ಭೇಟಿಯ ಸಮಯದಲ್ಲಿ ಮೋದಿ ಅವರು ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಮತ್ತು ಪ್ರಧಾನಿ ತ್ಸೆರಿಂಗ್ ಟೋಬ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.

ನವದೆಹಲಿ: ಭಾರತ ಮತ್ತು ಭೂತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಭೂತಾನ್'ಗೆ ತೆರಳಿದ್ದಾರೆ.

ಭೇಟಿಯ ಸಮಯದಲ್ಲಿ ಮೋದಿ ಅವರು ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಮತ್ತು ಪ್ರಧಾನಿ ತ್ಸೆರಿಂಗ್ ಟೋಬ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಮತ್ತು ಭೂತಾನ್ ರಾಜ ಜಿಗ್ಮೆ ಒಟ್ಟಾಗಿ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

ಭೂತಾನಿನ ಮಾಜಿ ರಾಜ ಜಿಗ್ಮೆ ಸಿಂಗ್ಯೆ ವಾಂಗ್ಚುಕ್ ಅವರ 70ನೇ ಜನ್ಮ ದಿನಾಚರಣೆಯ ಆಚರಣೆಯಲ್ಲಿಯೂ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಮೋದಿ ಅವರು ಥಿಂಪುವಿನ ತಾಶಿಚೋಡ್‌ಜಾಂಗ್‌ನಲ್ಲಿರುವ ಪವಿತ್ರ ಅವಶೇಷಗಳಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ ಮತ್ತು ಭೂತಾನ್ ಸರ್ಕಾರ ಆಯೋಜಿಸಿರುವ ಜಾಗತಿಕ ಶಾಂತಿ ಪ್ರಾರ್ಥನಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಪ್ರಧಾನಿ ಮೋದಿ ಅವರ ಭೇಟಿಯು ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ವರ್ಧಿಸುವ ಮತ್ತು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಲು, ಪರಸ್ಪರ ಆಸಕ್ತಿಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎರಡೂ ಕಡೆಯವರಿಗೆ ಅವಕಾಶವನ್ನು ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಭೂತಾನ್ ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭೂತಾನ್‌ಗೆ ತೆರಳುತ್ತಿದ್ದೇನೆ, ಅಲ್ಲಿ ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ಭೂತಾನ್ ನಾಲ್ಕನೇ ರಾಜನ 70 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಸಮಯದಲ್ಲಿ ಭೇಟಿ ನೀಡಲಾಗುತ್ತಿದೆ. ನಾನು ಭೂತಾನ್ ರಾಜ, ನಾಲ್ಕನೇ ರಾಜ ಮತ್ತು ಪ್ರಧಾನಿ ತ್ಸೆರಿಂಗ್ ಟೋಬ್ಗೇ ಅವರೊಂದಿಗೆ ಮಾತುಕತೆ ನಡೆಸುತ್ತೇನೆ. ಪುನತ್ಸಂಗ್ಚು-II ಜೊತೆಗೆ ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಲಾಗುವುದು. ಈ ಭೇಟಿ ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

SCROLL FOR NEXT