ಗಾಯಾಳುಗಳನ್ನು ಭೇಟಿಯಾದ ಸಿಎಂ ರೇಖಾಗುಪ್ತಾ 
ದೇಶ

Red Fort blast: ಮೃತರ ಸಂಬಂಧಿಕರಿಗೆ 10 ಲಕ್ಷ ರೂ, ಗಂಭೀರ ಗಾಯಾಳುಗಳಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ ರೇಖಾ ಗುಪ್ತಾ!

ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ರೂ. 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಸೋಮವಾರ ಸಂಜೆ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ರೂ. 10 ಲಕ್ಷ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಿಸಿದ್ದಾರೆ.

ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ರೂ. 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ದೆಹಲಿಯಲ್ಲಿ ನಡೆದ ದುರದೃಷ್ಟಕರ ಘಟನೆಯು ಇಡೀ ನಗರವನ್ನು ಆಘಾತವನ್ನುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತೀವ್ರವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ.

ದೆಹಲಿ ಸರ್ಕಾರ ಪ್ರತಿ ಸಂತ್ರಸ್ತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ಪರಿಹಾರಕ್ಕಾಗಿ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ