ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ದೇಶ

ದೆಹಲಿ ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಈ ಭೀಕರ ಕೃತ್ಯದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ನವದೆಹಲಿ: ದೆಹಲಿ ಸ್ಫೋಟದ ಬಗ್ಗೆ ಭಾರತದ ಪ್ರಮುಖ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರ ತನಿಖೆ ನಡೆಸುತ್ತಿದ್ದು, ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ.

ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹನ್ನೆರಡು ಜನರು ಸಾವಿಗೀಡಾಗಿದ್ದಾರೆ. ಸ್ಫೋಟಕ್ಕೆ ಕಾರಣವೇನೆಂದು ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

'ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ನನ್ನ ಸಹ ನಾಗರಿಕರಿಗೆ ಭರವಸೆ ನೀಡಲು ನಾನು ಬಯಸುತ್ತೇನೆ' ಎಂದು ಸಿಂಗ್ ರಕ್ಷಣಾ ಸಮಾವೇಶದಲ್ಲಿ ಹೇಳಿದರು.

'ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು. ಈ ದುರಂತಕ್ಕೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲಾಗುವುದು ಮತ್ತು ಯಾವುದೇ ಸಂದರ್ಭದಲ್ಲೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ರಾಷ್ಟ್ರಕ್ಕೆ ದೃಢವಾಗಿ ಭರವಸೆ ನೀಡಲು ಬಯಸುತ್ತೇನೆ' ಎಂದು ಅವರು ಹೇಳಿದರು.

ಮೃತರ ಕುಟುಂಬಗಳಿಗೆ ರಕ್ಷಣಾ ಸಚಿವರು ತಮ್ಮ ಸಂತಾಪ ಸೂಚಿಸಿದರು.

'ಈ ಭೀಕರ ಕೃತ್ಯದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಆಳವಾದ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ದೇವರು ಶಕ್ತಿ ಮತ್ತು ಸಾಂತ್ವನವನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ' ಎಂದರು.

ಸೋಮವಾರ ರಾತ್ರಿ ದೆಹಲಿ ಪೊಲೀಸರು ಸ್ಫೋಟದಲ್ಲಿ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದರು. ಮಂಗಳವಾರ ಮೂವರು ಗಾಯಾಳುಗಳಉ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 12 ಕ್ಕೆ ಏರಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್-Video

‘ಇದು ಒಂಟೆ ಕನಸಿನಂತಿದೆ’..: ಟ್ರಂಪ್ ಶಾಂತಿ ಒಪ್ಪಂದ ಹೇಳಿಕೆಗೆ ಇರಾನ್ ವ್ಯಂಗ್ಯ

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

SCROLL FOR NEXT