ನವದೆಹಲಿ: ಬಿಜೆಪಿ ಮತ್ತು ಚುನಾವಣಾ ಆಯೋಗ "ಮತಗಳ್ಳತನ ಮಾಡಲು" ಕೈಜೋಡಿಸುತ್ತಿವೆ ಹಾಗೂ "ಪ್ರಜಾಪ್ರಭುತ್ವದ ಕಗ್ಗೊಲೆ"ಯ ನೇರ ಪ್ರಸಾರವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕಿಡಿ ಕಾರಿದ್ದಾರೆ.
ಒಬ್ಬ ವ್ಯಕ್ತಿ ಹರಿಯಾಣ, ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಚಲಾಯಿಸಿದ್ದಾರೆ ಎಂದು ಹೇಳುವ ಕಾಂಗ್ರೆಸ್ ಪೋಸ್ಟ್ ಅನ್ನು ರಾಹುಲ್ ಗಾಂಧಿ X ನಲ್ಲಿ ಹಂಚಿಕೊಂಡಿದ್ದಾರೆ.
"ಲಕ್ಷಾಂತರ ಬಿಜೆಪಿ ಸದಸ್ಯರು ವಿವಿಧ ರಾಜ್ಯಗಳಲ್ಲಿ ಬಹಿರಂಗವಾಗಿ ಮತ ಚಲಾಯಿಸುತ್ತಿದ್ದಾರೆ. ಆದರೆ ಈ ಕಳ್ಳತನವನ್ನು ಮುಚ್ಚಿಹಾಕಲು, ಎಲ್ಲಾ ಪುರಾವೆಗಳನ್ನು ಅಳಿಸಲಾಗುತ್ತಿದೆ" ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.
ಬಿಜೆಪಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಬಹಿರಂಗವಾಗಿಯೇ ಮತಗಳನ್ನು ಕದಿಯುತ್ತಿವೆ - ಪ್ರಜಾಪ್ರಭುತ್ವದ ಕಗ್ಗೊಲೆಯ ನೇರ ಪ್ರಸಾರವಾಗುತ್ತಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಆಯೋಗ, ಬಿಜೆಪಿ ಜೊತೆ ಶಾಮೀಲಾಗಿ "ವೋಟ್ ಚೋರಿ" ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಅವರು ಹಲವು ದಿನಗಳಿಂದ ಆರೋಪಿಸುತ್ತಿದ್ದಾರೆ.
ಎರಡು ಹಂತದ ಬಿಹಾರ ವಿಧಾನಸಭಾ ಚುನಾವಣೆಯ ಮತದಾನ ನವೆಂಬರ್ 11 ರಂದು ಮುಕ್ತಾಯಗೊಂಡಿದ್ದು, ನವೆಂಬರ್ 14 ರಂದು ಫಲಿತಾಂಶ ಹೊರಬೀಳಲಿದೆ. ಬಿಹಾರ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಮತ್ತೆ ಗುಡುಗಿದ್ದಾರೆ.