ಪೊಲೀಸ್ ಅಧಿಕಾರಿಗಳ ಚಿತ್ರ 
ದೇಶ

'ವೈಟ್-ಕಾಲರ್' ಭಯೋತ್ಪಾದಕ ಮಾಡ್ಯೂಲ್‌ ನಂಟು: ಹರಿಯಾಣ ಮೌಲ್ವಿ ಬಂಧನ!

ನಿವಾಸದ ಮೇಲೆ ದಾಳಿ ನಡೆಸಿದಾಗ, ಪೊಲೀಸರು 2,500 ಕಿಲೋಗ್ರಾಂಗಳಿಗೂ ಹೆಚ್ಚು ಅಮೋನಿಯಂ ನೈಟ್ರೇಟ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀನಗರ: ಫರಿದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದಿಂದ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ 'ವೈಟ್-ಕಾಲರ್' ಭಯೋತ್ಪಾದಕ ಮಾಡ್ಯುಲ್ ಗೆ ತನಿಖೆಗೆ ಸಂಬಂಧಿಸಿದಂತೆ ಹರಿಯಾಣದ ಮೇವಾತ್‌ನ ಮೌಲ್ವಿಯೊಬ್ಬರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮೌಲ್ವಿ ಇಶ್ತಿಯಾಕ್ ಎಂದು ಗುರುತಿಸಲಾಗಿದೆ. ಅವರು ವಿಶ್ವವಿದ್ಯಾಲಯ ಸಂಕೀರ್ಣದೊಳಗಿನ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ, ಪೊಲೀಸರು 2,500 ಕಿಲೋಗ್ರಾಂಗಳಿಗೂ ಹೆಚ್ಚು ಅಮೋನಿಯಂ ನೈಟ್ರೇಟ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಇವು ಸಾಮಾನ್ಯವಾಗಿ ಸ್ಫೋಟಕಗಳಲ್ಲಿ ಬಳಸುವ ವಸ್ತುಗಳಾಗಿವೆ. ಇಶ್ತಿಯಾಕ್‌ನನ್ನು ವಿಚಾರಣೆಗಾಗಿ ಶ್ರೀನಗರಕ್ಕೆ ಕರೆತರಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದ ಒಂಬತ್ತನೇ ವ್ಯಕ್ತಿ ಇವರಾಗಿದ್ದಾರೆ.

ನಿಷೇಧಿತ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ (ಎಜಿಯುಎಚ್) ಗಳೊಂದಿಗೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಜಾಲವನ್ನು ನಿರ್ಮೂಲನೆ ಮಾಡಲು ಹರಿಯಾಣ ಮತ್ತು ಉತ್ತರ ಪ್ರದೇಶದ ಕಾನೂನು ಜಾರಿ ಸಂಸ್ಥೆಗಳ ಸಮನ್ವಯದೊಂದಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನವೆಂಬರ್ 10 ರಂದು ಅಂತರರಾಜ್ಯ ದಾಳಿಗಳನ್ನು ನಡೆಸಿದ ನಂತರ ಇವರನ್ನು ಬಂಧಿಸಲಾಗಿದೆ.

ತನಿಖಾಧಿಕಾರಿಗಳ ಪ್ರಕಾರ, ವಶಪಡಿಸಿಕೊಂಡ ಸ್ಫೋಟಕಗಳನ್ನು ಡಾ. ಮುಜಮ್ಮಿಲ್ ಮತ್ತು ಡಾ. ಉಮರ್ ನಬಿ ಅವರು ಇಶ್ತಿಯಾಕ್ ಅವರ ಮನೆಯಲ್ಲಿ ಸಂಗ್ರಹಿಸಿದ್ದರು ಎಂದು ಹೇಳಲಾಗಿದೆ. ಭಯೋತ್ಪಾದನಾ ಘಟಕದ ತನಿಖೆ ಮುಂದುವರೆದಂತೆ ಮತ್ತಷ್ಟು ಬಂಧನಗಳು ನಡೆಯುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ