ಸಂಗ್ರಹ ಚಿತ್ರ 
ದೇಶ

ಬಾಯ್ಲರ್ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವು; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಗುಜರಾತ್‌ನ ಭರೂಚ್ ಜಿಲ್ಲೆಯ ಔಷಧ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗುಜರಾತ್‌ನ ಭರೂಚ್ ಜಿಲ್ಲೆಯ ಔಷಧ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಯ್ಖಾ ಜಿಐಡಿಸಿ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಳಗಿನ ಜಾವ 2:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಖಾನೆಯೊಳಗಿನ ಪ್ರಬಲ ಬಾಯ್ಲರ್ ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಭರೂಚ್ ಜಿಲ್ಲಾಧಿಕಾರಿ ಗೌರಂಗ್ ಮಕ್ವಾನಾ ಹೇಳಿದ್ದಾರೆ. ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದರು.

ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ ಇಡೀ ಕಾರ್ಖಾನೆ ಕಟ್ಟಡ ಕುಸಿದು ಬಿದ್ದಿದೆ. ಹೆಚ್ಚಿನ ಕಾರ್ಮಿಕರು ಅಪಾಯದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು ದುರಾದುಷ್ಟವಶಾತ್ ಇಬ್ಬರು ಸಿಲುಕಿ ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಂದಿಸಿದ ನಂತರ ಅವರ ದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಯಿತು. ಘಟನೆಯಲ್ಲಿ ಸುಮಾರು 20 ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಫೋಟದ ನಂತರ ಒಬ್ಬ ವ್ಯಕ್ತಿ ಕಾಣೆಯಾಗಿದ್ದು ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆ ಇದೆ ಎಂದು ಕೆಲವು ಕಾರ್ಮಿಕರು ಹೇಳಿರುವುದರಿಂದ, ಅಗ್ನಿಶಾಮಕ ಇಲಾಖೆ, ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ ತಂಡಗಳು ಸ್ಥಳದಲ್ಲಿ ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ಜಿಲ್ಲಾಧಿಕಾರಿ ಗೌರಂಗ್ ಮಕ್ವಾನಾ ಹೇಳಿದ್ದಾರೆ.

ಜಿಲ್ಲಾಧಿಕಾರಿ ಗೌರಂಗ್ ಮಕ್ವಾನಾ ಅವರ ಪ್ರಕಾರ, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ನಿರ್ದೇಶಕರ (ಡಿಶ್) ಅಧಿಕಾರಿಗಳು ಸಹ ಘಟನೆಯ ತನಿಖೆಗಾಗಿ ಸ್ಥಳಕ್ಕೆ ತಲುಪಿದ್ದಾರೆ. ಕಾರ್ಖಾನೆಗೆ ಅಗತ್ಯವಿರುವ ಎಲ್ಲಾ ಪರವಾನ ಮತ್ತು ಅನುಮತಿ ಪಡೆದಿತ್ತಾ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT