ಪ್ರಕಾಶ್ ರಾಜ್ 
ದೇಶ

Hyderabad: ಬಹುಭಾಷಾ ನಟ ಪ್ರಕಾಶ್ ರಾಜ್ ಕ್ಷಮೆಯಾಚನೆ! ಯಾಕೆ ಗೊತ್ತಾ?

ಬೆಟ್ಟಿಂಗ್ ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಅಪರಾಧ ತನಿಖಾ ಇಲಾಖೆ (CID) ಮುಂದೆ ಬುಧವಾರ ವಿಚಾರಣೆಗೆ ಹಾಜರಾದ ಪ್ರಕಾಶ್ ರಾಜ್ , ತಮ್ಮ ಹೇಳಿಕೆಯನ್ನು ದಾಖಲಿಸಿದರು.

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟ ಪ್ರಕಾಶ್ ರಾಜ್ ಕ್ಷಮೆಯಾಚಿಸಿದ್ದಾರೆ. ಬೆಟ್ಟಿಂಗ್ ವೇದಿಕೆಗಳಲ್ಲಿ ಆರ್ಥಿಕ ನಷ್ಟದಿಂದಾಗಿ ಹಲವಾರು ಯುವಕರು ತಮ್ಮ ಪ್ರಾಣವನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪದ ನಂತರ ಬೆಟ್ಟಿಗೆ ಆ್ಯಪ್ ಗೆ ಬೆಂಬಲ ನೀಡಿದ್ದಕ್ಕಾಗಿ ಅವರು ಕ್ಷಮೆ ಕೋರಿದ್ದಾರೆ.

ಬೆಟ್ಟಿಂಗ್ ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಅಪರಾಧ ತನಿಖಾ ಇಲಾಖೆ (CID) ಮುಂದೆ ಬುಧವಾರ ವಿಚಾರಣೆಗೆ ಹಾಜರಾದ ಪ್ರಕಾಶ್ ರಾಜ್ , ತಮ್ಮ ಹೇಳಿಕೆಯನ್ನು ದಾಖಲಿಸಿದರು. ನಟರಾದ ದಗ್ಗುಬಾಟ್ಟಿ ರಾಣಾ ಮತ್ತು ಮಂಚು ಲಕ್ಷ್ಮಿ ಸೇರಿದಂತೆ ಹಲವಾರು ಆರೋಪಿಗಳಲ್ಲಿ ಪ್ರಕಾಶ್ ರಾಜ್ ಕೂಡಾ ಒಬ್ಬರಾಗಿದ್ದಾರೆ.

ನಾನು 2016 ರಲ್ಲಿ ಗೇಮಿಂಗ್ ಆ್ಯಪ್ ಅನ್ನು ಪ್ರಚಾರ ಮಾಡಿದ್ದೆ. ಆ ಆ್ಯಪ್ 2017 ರಲ್ಲಿ ಬೆಟ್ಟಿಂಗ್ ಆ್ಯಪ್ ಆಗಿ ರೂಪಾಂತರಗೊಂಡಿತು. ನಂತರ ನನ್ನ ಒಪ್ಪಂದವನ್ನು ರದ್ದುಗೊಳಿಸಿದೆ. ನಾನು ಅದನ್ನು ತಿಳಿದೋ ಅಥವಾ ತಿಳಿಯದೆಯೋ ಮಾಡಿದ್ದೇನೆ. ಆದರೂ ತಪ್ಪಾಗಿದೆ. ಆದ್ದರಿಂದ ನಾನು ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದರು.

ಬೆಟ್ಟಿಂಗ್ ಆ್ಯಪ್​ಗಳು ಮತ್ತು ಗೇಮಿಂಗ್ ಆ್ಯಪ್‌ಗಳಲ್ಲಿ ಹೂಡಿಕೆ ಮಾಡುವ ಮೂಲಕ ಅನೇಕ ಯುವಕರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬಗಳು ಬಳಲುತ್ತಿವೆ. ಕಠಿಣ ಪರಿಶ್ರಮ ಮಾತ್ರ ಫಲ ನೀಡುತ್ತದೆ. ಕಷ್ಟಪಟ್ಟು ದುಡಿದರೆ ಮಾತ್ರ ಹಣ ಬರುತ್ತದೆ. ಆದ್ದರಿಂದ ನಾವೆಲ್ಲರೂ ದುಡಿಯೋಣ. ದಯವಿಟ್ಟು ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿ. ಭವಿಷ್ಯದಲ್ಲಿ ನಾನು ಅಂತಹ ತಪ್ಪನ್ನು ಮಾಡುವುದಿಲ್ಲ ಎಂದು ಪ್ರಕಾಶ್ ರಾಜ್ ಹೇಳಿದರು.

ಲಕ್ಡಿಕಾಪುಲ್‌ನಲ್ಲಿರುವ ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರಾಜ್, ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದು, ತಮ್ಮ ಬ್ಯಾಂಕ್ ವಿವರಗಳನ್ನು ಒದಗಿಸಿರುವುದಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video