ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆಯ ಬಳಿ ಐ20 ಕಾರು ಸ್ಫೋಟಗೊಂಡ ಭಯಾನಕ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ದೃಶ್ಯಗಳು ಲಭ್ಯವಾಗಿದೆ.
ಘಟನೆಯ 15 ಸೆಕೆಂಡುಗಳ ಕ್ಲಿಪ್ ಇದಾಗಿದ್ದು, ವಿಡಿಯೋದಲ್ಲಿ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಜನದಟ್ಟಣೆ ಇರುವುದು, ಡಜನ್ಗಟ್ಟಲೆ ವಾಹನಗಳು ನಿಧಾನವಾಗಿ ಚಲಿಸುತಿರುವುದು ಹಾಗೂ ಇದ್ದಕ್ಕಿದ್ದಂತೆಯೇ ಕಾರು ಸ್ಫೋಟಗೊಂಡಿರುವುದು ಕಂಡು ಬಂದಿದೆ.
ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನೊಳಗೆ ಸಂಭವಿಸಿರುವ ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿದ್ದು, 29 ಜನ ಗಾಯಗೊಂಡಿದ್ದಾರೆ.
ಸ್ಫೋಟದ ವೇಳೆ ಹತ್ತಿರವೇ ಇದ್ದ ಅನೇಕ ವಾಹನಗಳು ಸುಟ್ಟುಹೋಗಿದ್ದು, ಹರಿಯಾಣ ನೋಂದಣಿ ಸಂಖ್ಯೆಯನ್ನು ಹೊಂದಿರುವ ಕಾರಿನಲ್ಲಿ ಸಂಭವಿಸಿದ ಈ ಘಟನೆ ದೆಹಲಿ ಪೊಲೀಸರು, ಎನ್‌ಐಎ, ಎನ್‌ಎಸ್‌ಜಿ ಮತ್ತು ವಿಧಿವಿಜ್ಞಾನ ತಂಡಗಳಿಂದ ಉನ್ನತ ಮಟ್ಟದ ತನಿಖೆಗೆ ಕಾರಣವಾಗಿದೆ.
ಯುಎಪಿಎ ಮತ್ತು ಸ್ಫೋಟಕ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಭದ್ರತಾ ತಪಾಸಣೆಯೊಂದಿಗೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.