ವಶಕ್ಕೆ ಪಡೆಯಲಾದ ಗ್ರೆನೇಡ್ 
ದೇಶ

ಪಂಜಾಬ್: ಗ್ರೆನೇಡ್ ದಾಳಿಗೆ ಸಂಚು; ಪಾಕಿಸ್ತಾನದ ISI ಸಂಪರ್ಕದಲ್ಲಿದ್ದ 10 ಹ್ಯಾಂಡ್ಲರ್ ಗಳ ಬಂಧನ!

ಬಂಧಿತ ಆರೋಪಿಗಳು ಮಲೇಷ್ಯಾ ಮತ್ತು ಪಾಕ್ ಮೂಲದ ಹ್ಯಾಂಡ್ಲರ್ ಗಳೊಂದಿಗೆ ಸಂಪರ್ಕದಲ್ಲಿದ್ದರು. ಅಲ್ಲದೇ ದಾಳಿ ನಡೆಸಲು ಹ್ಯಾಂಡ್ ಗ್ರೆನೇಡ್ ಸಂಗ್ರಹ ಮತ್ತು ವಿತರಣೆಯಲ್ಲಿ ನಿರತರಾಗಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಚಂಡಿಗಢ: ಪಂಜಾಬ್ ನಲ್ಲಿ ಗ್ರೆನೇಡ್ ದಾಳಿ ನಡೆಸಲು ಸಂಚು ಹಾಕಿದ್ದ ಪಾಕಿಸ್ತಾದ ಗುಪ್ತಚರ ಸಂಸ್ಥೆ (ISI)ನೊಂದಿಗೆ ಸಂಪರ್ಕದಲ್ಲಿದ್ದ ವಿದೇಶಿ ಮೂಲದ 10 ಹ್ಯಾಂಡ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮಲೇಷ್ಯಾ ಮತ್ತು ಪಾಕ್ ಮೂಲದ ಹ್ಯಾಂಡ್ಲರ್ ಗಳೊಂದಿಗೆ ಸಂಪರ್ಕದಲ್ಲಿದ್ದರು. ಅಲ್ಲದೇ ದಾಳಿ ನಡೆಸಲು ಹ್ಯಾಂಡ್ ಗ್ರೆನೇಡ್ ಸಂಗ್ರಹ ಮತ್ತು ವಿತರಣೆಯಲ್ಲಿ ನಿರತರಾಗಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪಂಜಾಬ್ ಡಿಜಿಪಿ ಗೌರವ್ ಯಾದವ್, ಪಂಜಾಬ್ ನಲ್ಲಿ ಶಾಂತಿ ಮತ್ತು ಭದ್ರತೆ ಖಾತ್ರಿಗೆ ಮತ್ತು ಗಡಿಯಾಚನೆಗಿನ ಭಯೋತ್ಪಾದನಾ ಜಾಲಗಳನ್ನು ಪತ್ತೆ ಹಚ್ಚಿ ನಾಶಪಡಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಪೋಟದಲ್ಲಿ 12 ಮಂದಿ ಮೃತಪಟ್ಟಿದ್ದರು. ಈ ಘಟನೆಯನ್ನು ಉಗ್ರರ ಕೃತ್ಯ ಎಂದು ಕರೆದಿರುವ ಕೇಂದ್ರ ಸರ್ಕಾರ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಈ ನಡುವೆ ಪಂಜಾಬ್ ನಲ್ಲಿ ಪಾಕಿಸ್ತಾನದ ISI ಸಂಪರ್ಕದಲ್ಲಿದ್ದ 10 ಹ್ಯಾಂಡ್ಲರ್ ಗಳ ಬಂಧನ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT