ಡಾ. ಉಮರ್ ನಬಿ ಮನೆ ಧ್ವಂಸ 
ದೇಶ

Delhi blast: 12 ಜನರ ಸಾವಿಗೆ ಕಾರಣವಾದ ಪುಲ್ವಾಮಾದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆ ಧ್ವಂಸ; Video

ಸ್ಫೋಟದ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಾತ್ರಿಯಿಡೀ ದಾಳಿ ನಡೆಸಿ, ಡಾ. ಉಮರ್ ಅವರ ಕುಟುಂಬದ ಮೂವರು ಸದಸ್ಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.

ನವದೆಹಲಿ: ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ ಪ್ರಬಲ ಕಾರು ಸ್ಫೋಟದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಧ್ವಂಸಗೊಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ರಾತ್ರಿಯಿಡೀ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಡಾ. ಉಮರ್ ನಬಿ ಮನೆಯನ್ನು ಅಧಿಕಾರಿಗಳು ನೆಲಸಮ ಮಾಡಿದ್ದಾರೆ.

ಸ್ಫೋಟದ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಾತ್ರಿಯಿಡೀ ದಾಳಿ ನಡೆಸಿ, ಡಾ. ಉಮರ್ ಅವರ ಕುಟುಂಬದ ಮೂವರು ಸದಸ್ಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಸ್ಫೋಟ ಸ್ಥಳದಿಂದ ಸಂಗ್ರಹಿಸಲಾದ ಡಿಎನ್‌ಎ ಮಾದರಿಗಳು ಉಮರ್‌ನ ತಾಯಿಯ ಡಿಎನ್‌ಎ ಮಾದರಿಗಳೊಂದಿಗೆ ಹೊಂದಿಕೆಯಾದ ನಂತರ ಅವನ ಗುರುತು ದೃಢಪಟ್ಟಿತು.

ಸ್ಫೋಟದ ವೇಳೆ ಕಾರಿನಲ್ಲಿ ಉಮರ್‌ ಒಬ್ಬನೇ ಇದ್ದ ಎಂಬುದನ್ನೂ ತನಿಖಾಧಿಕಾರಿಗಳು ದೃಢಪಡಿಸಿದ್ದಾರೆ. ನ.10ರಂದು ಕೆಂಪು ಕೋಟೆ ಸಮೀಪದಲ್ಲಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!