ತೇಜಸ್ವಿ ಯಾದವ್  
ದೇಶ

ನವೆಂಬರ್ 18ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತ: ತೇಜಸ್ವಿ ಯಾದವ್

ಮಂಗಳವಾರ ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜನರು ಮತ ಚಲಾಯಿಸುತ್ತಿದ್ದಾಗ ಎಕ್ಸಿಟ್ ಪೋಲ್ ಭವಿಷ್ಯವಾಣಿಗಳು ಹರಿದಾಡುತ್ತಿದ್ದವು ಎಂದು ತೇಜಸ್ವಿ ಯಾದವ್ ಮಾಧ್ಯಮಗಳಿಗೆ ತಿಳಿಸಿದರು.

ಪಾಟ್ನಾ: ರಾಷ್ಟ್ರೀಯ ಜನತಾ ದಳ (RJD) ನಾಯಕ ಮತ್ತು ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಪ್ರಸಾದ್ ಯಾದವ್ ಅವರು ನವೆಂಬರ್ 18 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದಾಗಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದು, ಎಕ್ಸಿಟ್ ಪೋಲ್ ಗಳನ್ನು ತಳ್ಳಿಹಾಕಿದ್ದಾರೆ. ಮಹಾಘಟಬಂಧನ ಖಂಡಿತವಾಗಿಯೂ ಅಧಿಕಾರಕ್ಕೆ ಬರುತ್ತದೆ, ತಾವು ನವೆಂಬರ್ 18ಕ್ಕೆ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಮತ ಎಣಿಕೆಗೆ ಮುನ್ನ ಬರೆದುಕೊಂಡಿದ್ದಾರೆ.

ಮಂಗಳವಾರ ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜನರು ಮತ ಚಲಾಯಿಸುತ್ತಿದ್ದಾಗ ಎಕ್ಸಿಟ್ ಪೋಲ್ ಭವಿಷ್ಯವಾಣಿಗಳು ಹರಿದಾಡುತ್ತಿದ್ದವು ಎಂದು ತೇಜಸ್ವಿ ಯಾದವ್ ಮಾಧ್ಯಮಗಳಿಗೆ ತಿಳಿಸಿದರು.

ಅಧಿಕಾರಿಗಳ ಮೇಲೆ ಮಾನಸಿಕ ಒತ್ತಡ ಹೇರುವ ಉದ್ದೇಶವಿತ್ತು, ಮತ ಎಣಿಕೆ ನಿಧಾನವಾಗುವುದನ್ನು ಸಹ ಇದು ಸ್ಪಷ್ಟವಾಗಿ ತೋರಿಸಿದೆ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಇಂದಿನ ಪರಿಸ್ಥಿತಿ 1995 ರಂತೆಯೇ ಇದೆ ಎಂದು ಹೇಳಿರುವ ತೇಜಸ್ವಿ ಯಾದವ್, ಈ ಬಾರಿ ಬದಲಾವಣೆ ಖಚಿತ ಎಂದು ಹೇಳಿದರು, ಪಕ್ಷವು ತಳಮಟ್ಟದಿಂದ ಪ್ರೋತ್ಸಾಹದಾಯಕ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ