ದೆಹಲಿ ಸ್ಫೋಟ ಪ್ರಕರಣ: ಹುಂಡೈ ಐ20 ಕಾರು ಮಾಲೀಕ 10 ದಿನ ಎನ್ಐಎ ಕಸ್ಟಡಿಗೆ ನೀಡಿದ ನ್ಯಾಯಾಲಯ. 
ದೇಶ

Delhi blast case: I20 ಕಾರು ಮಾಲೀಕ ಅಮೀರ್ ರಶೀದ್ ಅಲಿ 10 ದಿನ NIA ಕಸ್ಟಡಿಗೆ!

ನವೆಂಬರ್ 10 ರಂದು ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿ ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟಗೊಂಡ ನಂತರ 13 ಜನರು ಸಾವಿಗೀಡಾದರು ಮತ್ತು ಹಲವರು ಗಾಯಗೊಂಡಿದ್ದರು.

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಅಮೀರ್ ರಶೀದ್ ಅಲಿಯನ್ನು ದೆಹಲಿ ನ್ಯಾಯಾಲಯ ಸೋಮವಾರ 10 ದಿನಗಳ ಎನ್ಐಎ ಕಸ್ಟಡಿಗೆ ನೀಡಿದೆ.

ಪಟಿಯಾಲ ಹೌಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಬಿಗಿ ಭದ್ರತೆಯ ನಡುವೆ ಆರೋಪಿಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಮಾಧ್ಯಮದವರಿಗೆ ನ್ಯಾಯಾಲಯದೊಳಗೆ ಪ್ರವೇಶಿಸಲು ಅವಕಾಶವಿರಲಿಲ್ಲ.

'ದೆಹಲಿ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯ ಪಡೆ (RAF) ಸಿಬ್ಬಂದಿಯನ್ನು ನ್ಯಾಯಾಲಯದ ಸಂಕೀರ್ಣ ಮತ್ತು ಸುತ್ತಮುತ್ತ ನಿಯೋಜಿಸಲಾಗಿತ್ತು' ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಗಲಭೆ ನಿಗ್ರಹ ಗೇರ್‌ಗಳನ್ನು ಹೊಂದಿರುವ ತಂಡಗಳು ಸಜ್ಜಾಗಿವೆ ಎಂದು ಹೇಳಿದರು.

ನವೆಂಬರ್ 10 ರಂದು ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿ ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟಗೊಂಡ ನಂತರ 13 ಜನರು ಸಾವಿಗೀಡಾದರು ಮತ್ತು ಹಲವರು ಗಾಯಗೊಂಡಿದ್ದರು.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವೈದ್ಯ ಉಮರ್ ನಬಿ ಎಂಬಾತ ಆ ಕಾರನ್ನು ಚಲಾಯಿಸುತ್ತಿದ್ದ. ಹರಿಯಾಣದ ಫರಿದಾಬಾದ್‌ನಲ್ಲಿ ಭಾರಿ ಸ್ಫೋಟಕಗಳನ್ನು ವಶಪಡಿಸಿಕೊಂಡ 'ವೈಟ್ ಕಾಲರ್' ಭಯೋತ್ಪಾದಕ ಮಾಡ್ಯೂಲ್‌ನೊಂದಿಗೆ ಆತ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದೆ.

ಅಧಿಕಾರಿಗಳ ಪ್ರಕಾರ, ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಬಂಧಿಸಿದೆ ಮತ್ತು ಸ್ಫೋಟಗೊಂಡ ಹುಂಡೈ ಐ20 ಕಾರನ್ನು ಅವರ ಹೆಸರಿನಲ್ಲಿ ನೋಂದಾಯಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಕೇಸು ದಾಖಲು-Video

Switzerlandನಲ್ಲಿ ಗೋವಾ ಪಬ್ ರೀತಿ ದುರಂತ: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಮಂದಿಗೆ ಗಾಯ

ಚೆನ್ನೈನಲ್ಲಿಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ

Video-ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ.ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

SCROLL FOR NEXT