ಶಬರಿಮಲೆ ಯಾತ್ರಿಕರ ಸಾಂದರ್ಭಿಕ ಚಿತ್ರ 
ದೇಶ

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

ಬೆಂಗಳೂರು: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ನೇಗ್ಲೇರಿಯಾ ಫೌಲೇರಿಯಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರಿಗೆ ರಾಜ್ಯದ ಆರೋಗ್ಯ ಇಲಾಖೆ ಮಂಗಳವಾರ ಸಲಹಾ ಮಾರ್ಗಸೂಚಿಯನ್ನು ಹೊರಡಿಸಿದೆ.

ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಸಲಹೆಗಳನ್ನು ನೀಡಲಾಗಿದೆ.

  • ನೇಗ್ಲೇರಿಯಾ ಫೌಲೇರಿ ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ . ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ನಿಂತ ನೀರು, ಕೊಳ/ಈಜು ಕೊಳಗಳು ಹಾಗೂ ಕೆರೆಗಳಲ್ಲಿ ವಾಸ ಮಾಡುತ್ತೆ.

  • ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

  • ನೆಗ್ಲೇರಿಯಾ ಫೌಲರಿ ಅತ್ಯಂತ ವಿಷಕಾರಿ ಸೂಕ್ಷ್ಮ ಜೀವಿ. ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಲಿದೆ . ಅಮೀಬಿಕ್ ಮೆನಿಂಗೊಎನ್ನೆಫಲೈಟಿಸ್‌ ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ಗಳನ್ನು ಬಳಸಿ. ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿಯುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

  • ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ, ತೀವ್ರ ತಲೆನೋವು, ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗತಿಗಳಲ್ಲಿ ಬದಲಾವಣೆ ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆ ಪಡೆಯಲು ಸಮೀಪದ ಸರ್ಕಾರಿ ಆಸ್ಪತ್ರೆ, ವೈದ್ಯರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ: ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

ಬಲವಂತವಾಗಿ ಚುಂಬಿಸಿದ ಮಾಜಿ ಪ್ರಿಯಕರ, ನಾಲಿಗೆಯನ್ನೇ ಕಚ್ಚಿ ಕಿತ್ತೆಸೆದ ಮಹಿಳೆ!

SCROLL FOR NEXT