ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ; ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆಸುಕ್ಮಾ (ಛತ್ತೀಸಗಢ): ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಸಾವಿಗೀಡಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂಬಂಧ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದರು.
ಈವರೆಗೆ, ಓರ್ವ ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಭಾನುವಾರ, ಸುಕ್ಮಾದ ಭೆಜ್ಜಿ ಮತ್ತು ಚಿಂತಗುಫಾ ಪೊಲೀಸ್ ಠಾಣೆ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಸಾವಿಗೀಡಾಗಿದ್ದಾರೆ.
ಈ ವರ್ಷ ಇಲ್ಲಿಯವರೆಗೆ ಛತ್ತೀಸಗಢದಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ 263 ನಕ್ಸಲರು ಸಾವಿಗೀಡಾಗಿದ್ದಾರೆ. ಅವರಲ್ಲಿ, ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 234 ಜನರು, ರಾಯ್‌ಪುರ ವಿಭಾಗದ ವ್ಯಾಪ್ತಿಗೆ ಬರುವ ಗರಿಯಾಬಂದ್ ಜಿಲ್ಲೆಯಲ್ಲಿ 27 ಜನರು ಗುಂಡೇಟಿಗೆ ಬಲಿಯಾಗಿದ್ದಾರೆ.
ದುರ್ಗ ವಿಭಾಗದ ಮೊಹ್ಲಾ-ಮನ್‌ಪುರ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.