ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು

12 ಜನರಿದ್ದ ಸ್ಕಾರ್ಪಿಯೋ ಎಸ್‌ಯುವಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೊಂಡಗಾಂವ್: ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ -30 ರಲ್ಲಿ, SUV ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಮಸೋರಾ ಟೋಲ್ ಪ್ಲಾಜಾ ಬಳಿ ಈ ಅಪಘಾತ ಸಂಭವಿಸಿದ್ದು, ಮೃತರು ಕೊಂಡಗಾಂವ್‌ನಲ್ಲಿ ಸಿನಿಮಾ ವೀಕ್ಷಿಸಿ ಬಡೆ ಡೊಂಗರ್-ಭೈನ್ಸೆಬೆಡಾಗೆ ಹಿಂತಿರುಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

12 ಜನರಿದ್ದ ಸ್ಕಾರ್ಪಿಯೋ ಎಸ್‌ಯುವಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೃತರನ್ನು ಲಖನ್ ಮದವಿ, ಭೂಪೇಂದ್ರ ಮದವಿ, ರೂಪೇಶ್ ಮದವಿ, ನೂತನ್ ಮಂಝಿ ಮತ್ತು ಶತ್ರುಘ್ನ ಮಂಝಿ ಎಂದು ಗುರುತಿಸಲಾಗಿದೆ. ಇತರ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಗಾಯಾಳುಗಳಲ್ಲಿ ಕೆಲವರನ್ನು ಚಿಕಿತ್ಸೆಗಾಗಿ ಜಗದಲ್‌ಪುರಕ್ಕೆ ಕಳುಹಿಸಲಾಗಿದೆ. ಈ ಭೀಕರ ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ