ಸಂಗ್ರಹ ಚಿತ್ರ 
ದೇಶ

ಬಿಹಾರ ಸೋಲಿನಿಂದ ಕಂಗೆಟ್ಟ 'ಕೈ' ಪಡೆ: ಒಡೆದು ಛಿದ್ರವಾಯ್ತಾ INDIA ಒಕ್ಕೂಟ? ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ ಏಕಾಂಗಿ ಹೋರಾಟ?

ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಜನತಾ ದಳದ ತೇಜಸ್ವಿ ಯಾದವ್ ನೇತೃತ್ವದಲ್ಲಿ ಒಕ್ಕೂಟಕ್ಕೆ ಬಿಹಾರದಲ್ಲಿ ಅಭೂತ ಪೂರ್ವ ಗೆಲುವು ಸಿಗಲಿದೆ ಭಾವಿಸಲಾಗಿತ್ತು. ಆದರೆ ಚುನಾವಣಾ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿತ್ತು.

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್‌ ಮೈತ್ರಿ ಕೂಟದೊಂದಿಗೆ ಸ್ಪರ್ಧಿಸದೆ ಏಕಾಂಗಿ ಹೋರಾಟ ನಡೆಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಜನತಾ ದಳದ ತೇಜಸ್ವಿ ಯಾದವ್ ನೇತೃತ್ವದಲ್ಲಿ ಒಕ್ಕೂಟಕ್ಕೆ ಬಿಹಾರದಲ್ಲಿ ಅಭೂತ ಪೂರ್ವ ಗೆಲುವು ಸಿಗಲಿದೆ ಭಾವಿಸಲಾಗಿತ್ತು. ಆದರೆ ಚುನಾವಣಾ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿತ್ತು. ಚುನಾವಣೆಯಲ್ಲಿ ಒಕ್ಕೂಟ ಕೆಟ್ಟ ಪ್ರದರ್ಶನ ನೀಡಿ ಹೀನಾಯ ಸೋಲು ಅನುಭವಿಸಿತ್ತು.

ಮಹಾಘಟಬಂಧನ್‌ಗೆ ತೇಜಸ್ವಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಆರ್‌ಜೆಡಿ 26 ಸ್ಥಾನಗಳನ್ನು ಗಳಿಸಿತು, ಆದರೆ ಕಾಂಗ್ರೆಸ್ 6 ಸ್ಥಾನಗಳನ್ನು ಗಳಿಸಿ ಮುಜುಗರ ಅನುಭವಿಸಿತ್ತು. ನಿತೀಶ್-ಮೋದಿ ಬಿರುಗಾಳಿಗೆ ಮಹಾಘಟಬಂಧನ್ ಮಣ್ಣು ಮುಕ್ಕಿದೆ. ಹೀಗಾಗಿ ಇಂಡಿಯಾ ಒಕ್ಕೂಟ ಮೈತ್ರಿ ಇತಿಹಾಸದ ಪುಟ ಸೇರುತ್ತಾ ಅನ್ನೋ ಚರ್ಚೆ ಶುರುವಾಗಿದೆ.

ಮೈತ್ರಿ ಮುಂದುರಿಸದಿರಲು ಕಾಂಗ್ರೆಸ್ ಮುಂದಾಗಿದೆ. ರಾಹುಲ್ ಗಾಂಧಿ ಕೂಡ ಇಂಡಿ ಮೈತ್ರಿಕೂಟಕ್ಕೆ ಅಂತ್ಯ ಹಾಡಲು ಒಪ್ಪಿಗೆ ಸೂಚಿಸಿದ್ದಾರೆ ಅಂತ ಹೇಳಲಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಇಂಡಿ ಒಕ್ಕೂಟ ಅಗತ್ಯ ಇಲ್ಲ. ಅಗತ್ಯ ಇದ್ರೆ ರಾಜ್ಯಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳೋಣ. ಮುಂದಿನ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧೆಗೆ ಕಾಂಗ್ರೆಸ್ ಮುಂದಾಗಿದೆ ಅಂತ ಹೇಳಲಾಗ್ತಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌-ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ ಮೈತ್ರಿಕೂಟ ಗೆಲುವಿನ ವಿಶ್ವಾಸದಲ್ಲಿತ್ತು. ಆದರೆ ಆರ್‌ಜೆಡಿ 26 ಸ್ಥಾನ ಗಳಿಸಿದ್ರೆ, ಕಾಂಗ್ರೆಸ್‌ 6 ಸ್ಥಾನ ಗೆದ್ದು ಮುಖಭಂಗ ಅನುಭವಿಸಿತು. ರಾಹುಲ್‌ ಗಾಂಧಿ ಅವರು ಫಲ ಕೊಡಬಹುದೆಂದು ನಿರೀಕ್ಷಿಸಿದ್ದ ಮತ ಅಧಿಕಾರ ಯಾತ್ರೆ ಹಾಗೂ ವೋಟ್‌ ಚೋರಿ ಆರೋಪ ಕೈಕೊಟ್ಟಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ