ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರಧಾನಿ ಮೋದಿ ಅವರು 'ಗಮ್ಚಾ'(ತೆಳುವಾದ ಶಾಲು) ಬೀಸುವ ಮೂಲಕ ಬಿಹಾರದ ಜನರಿಗೆ ಧನ್ಯವಾದ ಅರ್ಪಿಸಿದರು.
243 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ.