ಹೈದ್ರಾಬಾದ್: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಕಾಲೇಜು ಕಟ್ಟಡದಿಂದ ಜಿಗಿದು ಶುಕ್ರವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಸಂತ್ರಸ್ತೆಯನ್ನು 19 ವರ್ಷದ ಪಲ್ಲವಿ ಎಂದು ಗುರುತಿಸಲಾಗಿದೆ. ಕುಪ್ಪಂನ ಪಿಇಎಸ್ ಕಾಲೇಜಿನಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದೆ.
ಮಾನಸಿಕ ತೊಂದರೆಯಿಂದ ಬಳಲುತ್ತಿದ್ದ ಪಲ್ಲವಿ, ಗುರುವಾರ ಸಂಜೆ ತಮ್ಮ ಹಾಸ್ಟೆಲ್ ಕಟ್ಟಡದಿಂದ ಜಿಗಿದಿದ್ದಾಳೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆಕೆ ಹಾಸ್ಟೆಲ್ ಕಟ್ಟಡದಿಂದ ಜಿಗಿದಿರುವುದು ಕಂಡುಬಂದಿದೆ. ತದನಂತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಲ್ಲವಿಯನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಶುಕ್ರವಾರ ಬೆಳಿಗ್ಗೆ ಅವರು ಗಾಯಗಳಿಂದಾಗಿ ನಿಧನರಾಗಿದ್ದಾರೆ.
ಸಂತ್ರಸ್ತೆ ಪಲ್ಲವಿ ಸಾವಿಗೆ ಕಾಲೇಜು ಸಿಬ್ಬಂದಿಯೇ ಕಾರಣ ಎಂದು ಆಕೆಯ ಕುಟುಂಬ ಆರೋಪಿಸಿದೆ. ಮೇಲ್ವಿಚಾರಣೆ ಮತ್ತು ಬೆಂಬಲದ ಕೊರತೆ ಎಂದು ಆರೋಪಿಸಿದೆ. ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಈ ಘಟನೆಯು ಕಾಲೇಜು ಆವರಣದಲ್ಲಿನ ಇತರ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಆಘಾತ ಮತ್ತು ಭೀತಿಯನ್ನು ಉಂಟುಮಾಡಿದ್ದು, ಹಾಸ್ಟೆಲ್‌ಗಳಲ್ಲಿನ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಪೋಷಕರು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.