ರಾಹುಲ್ ಗಾಂಧಿ 
ದೇಶ

Vote Chori: ದೆಹಲಿಯ ರಾಮಲೀಲಾ ಮೈದಾನದಲ್ಲಿ ಡಿಸೆಂಬರ್ 14 ರಂದು ಕಾಂಗ್ರೆಸ್ ಬೃಹತ್ ರ್‍ಯಾಲಿ

ಭಾರತೀಯ ಚುನಾವಣಾ ಆಯೋಗ(ಇಸಿಐ) ಪಕ್ಷಪಾತಿಯಾಗಿದ್ದು, ಚುನಾವಣೆಗಳ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಮಾನ ಹೋರಾಟದ ಪರಿಕಲ್ಪನೆಯನ್ನೇ ಸಂಪೂರ್ಣವಾಗಿ ನಾಶಪಡಿಸುತ್ತಿದೆ ಎಂದು ಅದು ಆರೋಪಿಸಿದೆ.

ನವದೆಹಲಿ: ಡಿಸೆಂಬರ್ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಮತ ಕಳ್ಳತನ’ವಿರುದ್ಧ ಬೃಹತ್ ರ್‍ಯಾಲಿ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿದೆ.

ಭಾರತೀಯ ಚುನಾವಣಾ ಆಯೋಗ(ಇಸಿಐ) ಪಕ್ಷಪಾತಿಯಾಗಿದ್ದು, ಚುನಾವಣೆಗಳ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಮಾನ ಹೋರಾಟದ ಪರಿಕಲ್ಪನೆಯನ್ನೇ ಸಂಪೂರ್ಣವಾಗಿ ನಾಶಪಡಿಸುತ್ತಿದೆ ಎಂದು ಅದು ಆರೋಪಿಸಿದೆ. ಮತ ಕಳ್ಳತನದ ಭೂತವು ಇಂದು ನಮ್ಮ ಪ್ರಜಾಪ್ರಭುತ್ವದ ಮೇಲೆ ಎರಗಿರುವ ದೊಡ್ಡ ಅಪಾಯವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

‘ನಮ್ಮ ಸಂವಿಧಾನವನ್ನು ನಾಶಮಾಡುವ ಈ ಪ್ರಯತ್ನಗಳ ವಿರುದ್ಧ ದೇಶದಾದ್ಯಂತ ಸಂದೇಶವನ್ನು ಕಳುಹಿಸಲು ಕಾಂಗ್ರೆಸ್, ಡಿಸೆಂಬರ್ 14ರಂದು (ಮಧ್ಯಾಹ್ನ 1.30 ರಿಂದ) ನವದೆಹಲಿಯ ರಾಮಲೀಲಾ ಮೈದಾನದಲ್ಲಿ 'ವೋಟ್ ಚೋರ್ ಗಡ್ಡಿ ಛೋಡ್' ಮಹಾ ರ್‍ಯಾಲಿಯನ್ನು ನಡೆಸಲಿದೆ’ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

‘ನಕಲಿ ಮತದಾರರನ್ನು ಸೇರಿಸುವುದು, ವಿರೋಧ ಪಕ್ಷಗಳ ಬಗ್ಗೆ ಒಲವು ಹೊಂದಿರುವ ಮತದಾರರ ಹೆಸರನ್ನು ಅಳಿಸುವುದು ಮತ್ತು ಸಾಮೂಹಿಕವಾಗಿ ಮತದಾರರ ಪಟ್ಟಿಯನ್ನು ತಿರುಚುವಿಕೆಯಂತಹ ಬಿಜೆಪಿ-ಇಸಿಐನ ದುಷ್ಟ ತಂತ್ರಗಳನ್ನು ತಿರಸ್ಕರಿಸಿ, ಭಾರತದ ಮೂಲೆ ಮೂಲೆಗಳಿಂದ ನಮಗೆ ಕೋಟ್ಯಂತರ ಸಹಿಗಳು ಬಂದಿವೆ’ಎಂದು ವೇಣುಗೋಪಾಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT