ಸಂವಿಧಾನವನ್ನು "ಬಡವರ ರಕ್ಷಣಾ ಕವಚ" ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾಗರಿಕರು ಅದರ ಮೇಲೆ "ಯಾವುದೇ ದಾಳಿಗೆ ಅವಕಾಶ ನೀಡುವುದಿಲ್ಲ" ಎಂದು ಪ್ರತಿಜ್ಞೆ ಮಾಡುವಂತೆ ಒತ್ತಾಯಿಸಿದ್ದಾರೆ. ಸಂವಿಧಾನ ವಿರುದ್ಧ ದಾಳಿಯಾದರೆ ಮೊದಲಿಗೆ ನಾನು ವಿರೋಧಿಸುತ್ತೇನೆ ಎಂದಿದ್ದಾರೆ.
ಇಂದು ಸಂವಿಧಾನ ದಿನದ ಅಂಗವಾಗಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವರು, ಸಂವಿಧಾನ ದಾಖಲೆಯು ಧರ್ಮ, ಜಾತಿ, ಪ್ರದೇಶ, ಭಾಷೆ ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ, ಗೌರವ ಮತ್ತು ನ್ಯಾಯವನ್ನು ಖಾತರಿಪಡಿಸುವ "ಪವಿತ್ರ ಭರವಸೆ" ಎಂದು ಕರೆದುಕೊಂಡಿದ್ದಾರೆ.
ಸಂವಿಧಾನವನ್ನು ರಕ್ಷಿಸುವವರೆಗೆ, ಪ್ರತಿಯೊಬ್ಬ ಭಾರತೀಯನ ಹಕ್ಕುಗಳನ್ನು ರಕ್ಷಿಸಲಾಗುತ್ತದೆ ಎಂದು "ಅದನ್ನು ರಕ್ಷಿಸುವುದು ನನ್ನ ಕರ್ತವ್ಯ" ಎಂದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂವಿಧಾನದ ಮೂಲಭೂತ ಮೌಲ್ಯಗಳಾದ ನ್ಯಾಯ, ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ, ಜಾತ್ಯತೀತತೆ ಮತ್ತು ಸಮಾಜವಾದವನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿ ಹೇಳುವ ಮೂಲಕ ಪ್ರಾಮುಖ್ಯತೆಯನ್ನು ಸಾರಿದರು.
ಬಿ.ಆರ್. ಅಂಬೇಡ್ಕರ್ ಅವರನ್ನು ಉಲ್ಲೇಖಿಸಿ, ಸಂವಿಧಾನವು "ಒಂದು ಜೀವನ ವಿಧಾನ" ಎಂದು ಹೇಳಿದರು. ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಮೌಲಾನಾ ಆಜಾದ್, ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು ಮತ್ತು ಅಂಬೇಡ್ಕರ್ ಸೇರಿದಂತೆ ಸಂವಿಧಾನ ಸಭೆಯ ನಾಯಕರಿಗೆ ಗೌರವ ಸಲ್ಲಿಸಿದರು.
ಪ್ರಜಾಪ್ರಭುತ್ವ ಸ್ವಾತಂತ್ರ್ಯಗಳನ್ನು ಕಾಪಾಡಲು, ರಾಷ್ಟ್ರೀಯ ಏಕತೆ, ಸಾಮರಸ್ಯ ಮತ್ತು ಸಹೋದರತ್ವವನ್ನು ಕಾಪಾಡಲು ನವೀಕೃತ ಬದ್ಧತೆಗೆ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
1949 ರಲ್ಲಿ ಸಂವಿಧಾನ ಸಭೆಯು ಸಂವಿಧಾನವನ್ನು ಅಂಗೀಕರಿಸಿದ ದಿನವನ್ನು ಗುರುತಿಸಲು 2015 ರಿಂದ ನವೆಂಬರ್ 26 ರಂದು ಸಂವಿಧಾನ ದಿನ ಅಥವಾ ಸಂವಿಧಾನ್ ದಿವಸ್ ನ್ನು ಆಚರಿಸಿಕೊಂಡು ಬರಲಾಗುತ್ತಿದೆ.