ಶ್ರೀರಾಮನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ 
ದೇಶ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಗುಜರಾತ್‌ನಲ್ಲಿ ಏಕತಾ ಪ್ರತಿಮೆ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರೇ ಈ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ.

ಪಣಜಿ: ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದ 550ನೇ ವರ್ಷಾಚರಣೆಯ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗೋವಾದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.

ದಕ್ಷಿಣ ಗೋವಾದ ಪರ್ತಗಲಿಯಲ್ಲಿರುವ ಮಠದ ದೇವಾಲಯಕ್ಕೂ ಪಧಾನಿ ಮೋದಿ ಭೇಟಿ ನೀಡಿದರು. ಈ ಮಠವು ಭಾರತದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದ್ದು, ಇದು ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕೊಡುಗೆಗಳಿಗೆ ಹೆಸರುವಾಸಿಯಾಗಿದೆ ಮತ್ತು ಸಾರಸ್ವತ ಸಮುದಾಯದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ.

ಗುಜರಾತ್‌ನಲ್ಲಿ ಏಕತಾ ಪ್ರತಿಮೆ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರೇ ಈ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ ಎಂದು ಗೋವಾ ಲೋಕೋಪಯೋಗಿ ಇಲಾಖೆ ಸಚಿವ ದಿಗಂಬರ ಕಾಮತ್ ಹೇಳಿದ್ದಾರೆ. ಇದು ಶ್ರೀರಾಮನ ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ.

ಗೋವಾ ರಾಜ್ಯಪಾಲ ಅಶೋಕ್ ಗಜಪತಿ ರಾಜು ಮತ್ತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್