ಅನ್ಮೋಲ್ ಬಿಷ್ಣೋಯ್  online desk
ದೇಶ

ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ NIA ಕಸ್ಟಡಿ ಡಿಸೆಂಬರ್ 5 ರವರೆಗೆ ವಿಸ್ತರಣೆ

ವಿಶೇಷ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು ಆರೋಪಿ ಗ್ಯಾಂಗ್‌ಸ್ಟರ್ ಎನ್ಐಎ ಕಷ್ಟಡಿ ಅವಧಿಯನ್ನು ಡಿಸೆಂಬರ್ 5 ರವರೆಗೆ ವಿಸ್ತರಿಸಿ ಆದೇಶಿಸಿದರು.

ನವದೆಹಲಿ: ದೆಹಲಿ ನ್ಯಾಯಾಲಯವು ಶನಿವಾರ ಗಡಿಪಾರು ಮಾಡಲಾದ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಅವರ NIA ಕಸ್ಟಡಿಯನ್ನು ಮತ್ತೆ ಏಳು ದಿನಗಳವರೆಗೆ ವಿಸ್ತರಿಸಿದೆ.

NIA ಪ್ರಧಾನ ಕಚೇರಿಯಲ್ಲಿ ಹೆಚ್ಚಿನ ಭದ್ರತೆಯ ನಡುವೆ ನಡೆದ ವಿಚಾರಣೆಯಲ್ಲಿ ವಿಶೇಷ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು ಆರೋಪಿ ಗ್ಯಾಂಗ್‌ಸ್ಟರ್ ಎನ್ಐಎ ಕಷ್ಟಡಿ ಅವಧಿಯನ್ನು ಡಿಸೆಂಬರ್ 5 ರವರೆಗೆ ವಿಸ್ತರಿಸಿ ಆದೇಶಿಸಿದರು.

ಇದಕ್ಕೂ ಮೊದಲು ನವೆಂಬರ್ 19 ರಂದು, ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಹೋದರ ಮತ್ತು ಆಪ್ತ ಸಹಾಯಕ ಅನ್ಮೋಲ್ ನನ್ನು 11 ದಿನಗಳ NIA ಕಸ್ಟಡಿಗೆ ನೀಡಲಾಗಿತ್ತು.

NCP ನಾಯಕ ಸಿದ್ದಿಕ್ ಹತ್ಯೆ, ಏಪ್ರಿಲ್ 2024 ರಲ್ಲಿ ನಟ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಗುಂಡಿನ ದಾಳಿ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಮತ್ತು ಇತರ ಅಪರಾಧಗಳ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಅನ್ಮೋಲ್ ನನ್ನು ನವೆಂಬರ್ 18 ರಂದು ಅಮೆರಿಕ, ಭಾರತಕ್ಕೆ ಗಡಿಪಾರು ಮಾಡಿತ್ತು.

ಕಳೆದ ವರ್ಷ ನವೆಂಬರ್‌ನಲ್ಲಿ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್‌ನನ್ನು ಅಮೆರಿಕದಲ್ಲಿ ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

IPL 2026: RCB ಬ್ಯಾಟಿಂಗ್ ವೈಫಲ್ಯ, 4 ವಿಕೆಟ್ ಗಳಿಂದ ಗೆದ್ದ ಗುಜರಾತ್ ಟೈಟನ್ಸ್!

ಭಬಾನಿಪುರದ ಸ್ಟ್ರಾಂಗ್ ರೂಮ್‌ಗೆ ದೌಡಾಯಿಸಿದ ಮಮತಾ ಬ್ಯಾನರ್ಜಿ! EVM ಟ್ಯಾಂಪರಿಂಗ್ ಆರೋಪ

ನನ್ನೊಂದಿಗೆ ಸೆಕ್ಸ್ ಮಾಡು, ಒಪ್ಪದೇ ಇದ್ರೆ ನಿನ್ನ ವೃತ್ತಿ ಜೀವನ ನಾಶ, ಭಾರತೀಯ ಸಹೋದ್ಯೋಗಿಗೆ ಜೆಪಿ ಮೋರ್ಗಾನ್ ಮಹಿಳಾ ಅಧಿಕಾರಿ ಬೆದರಿಕೆ

Exit polls ಮೇಲೆ ನನಗೆ ನಂಬಿಕೆ ಇಲ್ಲ: ಅದೊಂದು ಜಾಲ- ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿ!

SCROLL FOR NEXT