ಪ್ರಧಾನಿ ನರೇಂದ್ರ ಮೋದಿ  online desk
ದೇಶ

ಪ್ರಧಾನಿ ಮೋದಿ 'ಆಧುನಿಕ ರಾವಣ'; ಶೀಘ್ರವೇ ಅವರ ಚಿನ್ನದ ಅರಮನೆ ಸುಟ್ಟು ಬೂದಿಯಾಗಲಿದೆ: ಉದಿತ್ ರಾಜ್

ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಒಬ್ಬ ವ್ಯಕ್ತಿಯ ಮೇಲಿನ ದ್ವೇಷದಲ್ಲಿ, ಕಾಂಗ್ರೆಸ್ ಸಾಂವಿಧಾನಿಕ ಹುದ್ದೆಗಳ ಘನತೆಯನ್ನು ಮರೆತುಬಿಡುತ್ತದೆ ಎಂದು ಬಿಜೆಪಿ ತಿರುಗೇಟು ನೀಡಿದೆ, ವಿರೋಧ ಪಕ್ಷದ ನಾಯಕರು ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. "ಮೋದಿ ವಿರೋಧಿ ಮತ್ತು ಭಾರತ ವಿರೋಧಿಯಾಗಿರುವುದು ಅವರ ಪ್ರಮಾಣಿತ ಕಾರ್ಯಾಚರಣಾ ವಿಧಾನವಾಗಿದೆ" ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

ವೈಭವ್ ಸೂರ್ಯವಂಶಿಗೆ ಬಂಪರ್ ಆಫರ್: ಜಾರ್ಖಂಡ್ ಆರೋಗ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್

SCROLL FOR NEXT