ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ (87) ಅವರು ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಫಾರೂಕ್ ಅಬ್ದುಲ್ಲಾ ಅವರಿಗೆ ಮಂಗಳವಾರ ಹೊಟ್ಟೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಶ್ರೀನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಂದು ಪಕ್ಷದ ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.
ಈ ಹಿಂದೆ 2014ರ ಡಿಸೆಂಬರ್ ನಲ್ಲಿ ಅವರು ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
ಅಲ್ಲಿಂದ ಚೆನ್ನಾಗಿದ್ದ ಅವರಿಗೆ ಕಳೆದ ಕೆಲವು ದಿನಗಳಿಂದ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಅವರ ಆರೋಗ್ಯ ಪರಿಸ್ಥಿತಿ ಸುಧಾರಿಸುತ್ತಿದೆ. ಇಂದು ಅಥವಾ ನಾಳೆ ನಂತರ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.