ಸಂಗ್ರಹ ಚಿತ್ರ 
ದೇಶ

ಓವರ್‌ಟೇಕ್ ಮಾಡುವ ಯತ್ನದಲ್ಲಿ ಟ್ರಕ್-ಬೈಕ್‌ಗೆ ಗುದ್ದಿದ ಪಿಕಪ್ ವ್ಯಾನ್: ನಾಲ್ವರು ಸಾವು, 15 ಮಂದಿಗೆ ಗಾಯ

ಗುಜರಾತ್‌ನ ಪಠಾಣ್ ಜಿಲ್ಲೆಯ ರಾಧನ್‌ಪುರ ಬಳಿ ಪಿಕಪ್ ವ್ಯಾನ್ ಟ್ರಕ್ ಮತ್ತು ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ..

ಪಠಾಣ್: ಗುಜರಾತ್‌ನ ಪಠಾಣ್ ಜಿಲ್ಲೆಯ ರಾಧನ್‌ಪುರ ಬಳಿ ಪಿಕಪ್ ವ್ಯಾನ್ ಟ್ರಕ್ ಮತ್ತು ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೋತಿ ಪಿಪ್ಲಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಸಂತ್ ನಾಯ್ ತಿಳಿಸಿದ್ದಾರೆ. ರಸ್ತೆ ನಿರ್ಮಾಣ ಕಾರ್ಯದ ಕಾರಣದಿಂದಾಗಿ ಒಂದು ಬದಿಯಲ್ಲಿ ಸಂಚಾರ ನಿರ್ಬಂಧಿಸಲ್ಪಟ್ಟ ಸ್ಥಳದಲ್ಲಿ ಸುಮಾರು 15 ಪ್ರಯಾಣಿಕರಿದ್ದ ಪಿಕಪ್ ವ್ಯಾನ್ ಓವರ್‌ಟೇಕ್ ಮಾಡುವ ಪ್ರಯತ್ನದ ಸಮಯದಲ್ಲಿ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ವೇಳೆ ವ್ಯಾನ್ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಎಸ್ಪಿ ಹೇಳಿದರು.

ಮೃತರಲ್ಲಿ ವ್ಯಾನ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಸವಾರರಿಬ್ಬರು ಸೇರಿದ್ದಾರೆ. ಹದಿನೈದು ಜನರಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಲಕ್ಷ್ಮಣ್ ದೇಸಾಯಿ, ಯಶ್ ಉಂಚೋಸನ್, ಕನು ರಾವಲ್ ಮತ್ತು ನಾಸಿಬ್ ಖಾನ್ ಎಂದು ಗುರುತಿಸಲಾಗಿದೆ ಎಂದು ರಾಧನ್‌ಪುರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Namma Metro ಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: Hindu ಯುವಕನ ಜೊತೆ Muslim ಯುವತಿ ಪರಾರಿ?: ಪೊಲೀಸ್ ಠಾಣೆ ಎದುರೇ ಚೂರಿ ಇರಿತ!

BBK 12: 'ಸಿಂಪಥಿ ಗಿಟ್ಟಿಸಲು ಜಾಹ್ನವಿ ಆರೋಪ, ನನ್ನ ಕೆಲಸ ಹೋದಾಗ ಆಕೆ ವರ್ತನೆ ಬದಲು, ಬೇರೊಬ್ಬ ಗಂಡಸಿನೊಂದಿಗೆ..': ಪತಿ ಕಾರ್ತಿಕ್ ಕೆಂಡಾಮಂಡಲ!

ಎಲ್ಲಾ ಬೋಯಿಂಗ್ 787 ವಿಮಾನಗಳ ವಿದ್ಯುತ್ ವ್ಯವಸ್ಥೆ ಪರಿಶೀಲಿಸಿ: DGCAಗೆ ಪೈಲಟ್‌ಗಳ ಮನವಿ

ಜಾತಿ ಗಣತಿ ಕುರಿತು ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ ಪ್ರತಿಪಕ್ಷ ಬಿಜೆಪಿ, ಜೆಡಿಎಸ್

SCROLL FOR NEXT