ಬಿಹಾರ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 6ರಂದು ಮೊದಲ ಹಂತದ ಮತದಾನ ನಡೆದರೇ ನವೆಂಬರ್ 11ಕ್ಕೆ ಎರಡನೇ ಹಂತದ ಮತದಾನ ನಡೆಯಲಿದ್ದು ನ.14ಕ್ಕೆ ಫಲಿತಾಂಶ ಹೊರಬೀಳಲಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ದಿನಾಂಕ ಘೋಷಿಸಿದರು. 243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ 7.43 ಕೋಟಿ ಮತದಾರರಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೇ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ.