ಸಿಜೆಐ ಬಿಆರ್ ಗವಾಯಿ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ದೇಶ

'ಶೂ ಎಸೆತ': CJI ಬಿಆರ್ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ; ಹೇಳಿದ್ದೇನು?

ಸುಪ್ರೀಂಕೋರ್ಟ್ ನಲ್ಲಿ ಇಂದು ಬೆಳಗ್ಗೆ ನಡೆದ ಘಟನೆ ಎಲ್ಲಾ ಭಾರತೀಯರನ್ನು ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳು ನಡೆಯಬಾರದು. ಇದು ಸಂಪೂರ್ಣ ಖಂಡನೀಯವಾದದ್ದು ಎಂದಿದ್ದಾರೆ.

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿಆರ್ ಗವಾಯಿ ಮೇಲೆ ಶೂ ಎಸೆತ ಘಟನೆ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಧ್ವನಿಗೂಡಿಸಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಿ.ಆರ್. ಗವಾಯಿ ಜೊತೆಗೆ ಮಾತನಾಡಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ನಲ್ಲಿ ಇಂದು ಬೆಳಗ್ಗೆ ನಡೆದ ಘಟನೆ ಎಲ್ಲಾ ಭಾರತೀಯರನ್ನು ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳು ನಡೆಯಬಾರದು. ಇದು ಸಂಪೂರ್ಣ ಖಂಡನೀಯವಾದದ್ದು ಎಂದಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ನ್ಯಾಯಮೂರ್ತಿ ಗವಾಯಿ ಅವರು ತೋರಿದ ಶಾಂತತೆಯನ್ನು ನಾನು ಮೆಚ್ಚಿದ್ದೇನೆ. ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಆತ್ಮವನ್ನು ಬಲಪಡಿಸುವ ಅವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸೋಮವಾರ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಕೋರ್ಟ್ ರೂಂ ನಂ.1ರಲ್ಲಿ 71 ವರ್ಷದ ವಕೀಲ ರಾಕೇಶ್ ಕಿಶೋರ್ ಗಲಾಟೆ ಮಾಡಿದ್ದು, ವೇದಿಕೆಯ ಬಳಿಗೆ ಬಂದು ತಮ್ಮ ಶೂ ತೆಗೆದು ಮುಖ್ಯ ನ್ಯಾಯಮೂರ್ತಿಯತ್ತ ಎಸೆಯಲು ಪ್ರಯತ್ನಿಸಿದ್ದಾರೆ. ತಕ್ಷಣ ನ್ಯಾಯಾಲಯದಲ್ಲಿ ಹಾಜರಿದ್ದ ಭದ್ರತಾ ಸಿಬ್ಬಂದಿ ಅವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

ಮಾನವೀಯತೆ ಮರೆತ ಜನ: ಜನನಿಬಿಡ ರಸ್ತೆಯಲ್ಲೇ ಯುವ ದಂಪತಿ ಮೇಲೆ ಭೀಕರ ಹಲ್ಲೆ; Video Viral ಆದ ನಂತರ ಆಕ್ರೋಶ!

ಹೈಕೋರ್ಟ್ ನಲ್ಲೂ Umar Khalid ಗೆ ಹಿನ್ನಡೆ: ಅನಾರೋಗ್ಯ ಪೀಡಿತ ತಾಯಿ, ಜಾಮೀನು ಅರ್ಜಿ ವಜಾ!

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ ಈಗ ED ವಶಕ್ಕೆ; 70 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಆರೋಪ!

SCROLL FOR NEXT