ಮುಖ್ಯ ನ್ಯಾಯಮೂರ್ತಿ ಸಿಜೆಐ ಗವಾಯಿ 
ದೇಶ

'ಇದೆಲ್ಲಾ ನನ್ ಮೇಲೆ ಪರಿಣಾಮ ಬೀರೊಲ್ಲ': ನ್ಯಾಯಾಲಯದಲ್ಲಿ CJI ಮೇಲೆ ಶೂ ಎಸೆದ ವಕೀಲ; Gavai ಪ್ರತಿಕ್ರಿಯೆ

ಸುಪ್ರೀಂ ಕೋರ್ಟ್ ಕಾಂಪ್ಲೆಕ್ಸ್ ನ ನ್ಯಾಯಾಲಯ ಸಂಖ್ಯೆ 1 ರಲ್ಲಿ ನಡೆದ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬುವವರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದಾರೆ.

ನವದೆಹಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆದ ಆಘಾತಕಾರಿ ಮತ್ತು ವಿಚಿತ್ರ ಘಟನೆ ನಡೆದಿದೆ.

ಹೌದು.. ಸುಪ್ರೀಂ ಕೋರ್ಟ್ ಕಾಂಪ್ಲೆಕ್ಸ್ ನ ನ್ಯಾಯಾಲಯ ಸಂಖ್ಯೆ 1 ರಲ್ಲಿ ನಡೆದ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬುವವರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ವಕೀಲರಿಂದ ಪ್ರಕರಣಗಳ ಉಲ್ಲೇಖವನ್ನು ಕೇಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಆರೋಪಿ ವಕೀಲ ಪೀಠದ ಬಳಿಗೆ ತೆರಳಿ, ತನ್ನ ಶೂವನ್ನು ನ್ಯಾಯಮೂರ್ತಿಯವರ ಮೇಲೆ ಎಸೆಯಲು ಯತ್ನಿಸಿದ್ದಾರೆ. ಆದರೆ, ಕೋರ್ಟ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ, ವಕೀಲನನ್ನು ಹೊರಗೆ ಕರೆದೊಯ್ದಿದ್ದಾರೆ. ಹೊರಗೆ ಹೋಗುವಾಗ ವಕೀಲ, “ಸನಾತನ ಕಾ ಅಪಮಾನ್ ನಹಿ ಸಹೇಂಗೆ” (ಸನಾತನ ಧರ್ಮದ ಅವಮಾನವನ್ನು ಸಹಿಸುವುದಿಲ್ಲ) ಎಂದು ಕೂಗಿದ್ದಾನೆ.

ತಾಳ್ಮೆ ವಹಿಸಿದ ಸಿಜೆಐ

ಇನ್ನು ಈ ಆಘಾತಕಾರಿ ಬೆಳವಣಿಗೆಯ ಹೊರತಾಗಿಯೂ ಸಿಜೆಐ ಗವಾಯಿ ಅವರು ತಾಳ್ಮೆ ವಹಿಸಿದ್ದರು. 'ಇದರಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗಿಲ್ಲ. ಇಂತಹ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ' ಎಂದು ಕೋರ್ಟ್‌ನಲ್ಲಿದ್ದ ವಕೀಲರಿಗೆ ವಾದವನ್ನು ಮುಂದುವರೆಸಲು ಸೂಚಿಸಿದರು.

ದೆಹಲಿ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಆರೋಪಿ ವಕೀಲರನ್ನು ಭದ್ರತಾ ಸಿಬ್ಬಂದಿ ಸುಪ್ರೀಂ ಕೋರ್ಟ್‌ನ ಭದ್ರತಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. "ಅವರು ಮಯೂರ್ ವಿಹಾರ್ ಪ್ರದೇಶದ ನಿವಾಸಿ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ನ ನೋಂದಾಯಿತ ಸದಸ್ಯರಾಗಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು. ಪೊಲೀಸರು ಇಡೀ ಪ್ರಕರಣವನ್ನು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಮಧ್ಯಪ್ರದೇಶದ ಯುನೆಸ್ಕೋ ವಿಶ್ವ ಪರಂಪರೆಗೆ ಸೇರ್ಪಡೆಯಾಗಿರುವ ಖಜುರಾಹೊ ದೇವಾಲಯ ಸಂಕೀರ್ಣದ ಭಾಗವಾಗಿರುವ ಜವಾರಿ ದೇವಾಲಯದಲ್ಲಿ ಏಳು ಅಡಿ ಎತ್ತರದ ವಿಷ್ಣುವಿನ ವಿಗ್ರಹವನ್ನು ಪುನರ್ನಿರ್ಮಿಸಲು ಮತ್ತು ಮರುಸ್ಥಾಪಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಿಜೆಐ ಗವಾಯಿ ನೇತೃತ್ವದ ಪೀಠ ವಜಾಗೊಳಿಸಿತ್ತು.

ಈ ಪ್ರಕರಣ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಮೀಕ್ಷೆಯ (ASI) ವ್ಯಾಪ್ತಿಗೆ ಬರುತ್ತದೆಯೇ ಹೊರತು ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಏನೇ ಮಾಡುವುದರಿದ್ದರೂ ಎಎಸ್‌ಐ ಅನುಮತಿ ನೀಡಬೇಕಾಗಿದೆ. ಕ್ಷಮಿಸಿ ಎಂದು ತಿಳಿಸಿದ್ದರು.

ಸಂಪೂರ್ಣವಾಗಿ ಪ್ರಚಾರ ಹಿತಾಸಕ್ತಿಗಾಗಿ ಈ ಅರ್ಜಿಯನ್ನು ನೀವು ಸಲ್ಲಿಕೆ ಮಾಡಿದ್ದೀರಿ. ಹೋಗಿ ದೇವರಲ್ಲೇ ಏನಾದರೂ ಮಾಡುವಂತೆ ಬೇಡಿಕೊಳ್ಳಿ. ನೀವು ವಿಷ್ಣುವಿನ ಕಟ್ಟಾ ಭಕ್ತ ಎಂದು ಹೇಳುತ್ತೀರಿ. ಆದ್ದರಿಂದ ಈಗಲೇ ಹೋಗಿ ಪ್ರಾರ್ಥಿಸಿ ಮತ್ತು ಸ್ವಲ್ಪ ಧ್ಯಾನ ಮಾಡಿ ಎಂದು ಸಿಜೆಐ ಗವಾಯಿ ಹೇಳಿದ್ದರು.

ಮೊಘಲ್ ಆಕ್ರಮಣದ ಸಮಯದಲ್ಲಿ ವಿಗ್ರಹವು ವಿರೂಪಗೊಂಡಿದ್ದು, ಅದನ್ನು ಪುನಃಸ್ಥಾಪಿಸಲು ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿದರೂ ಅದು ಅದೇ ಸ್ಥಿತಿಯಲ್ಲಿದೆ ಎಂದು ರಾಕೇಶ್ ದಲಾಲ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನ.14ಕ್ಕೆ ಫಲಿತಾಂಶ ಪ್ರಕಟ!

Indian Stock Market: ವಾರದ ಮೊದಲ ದಿನವೇ ಮಾರುಕಟ್ಟೆ ಏರಿಕೆ, 25 ಸಾವಿರ ಅಂಕ ಗಡಿ ದಾಟಿದ Nifty50

Frances New PM Resigns: ಕ್ಯಾಬಿನೆಟ್ ರಚನೆ ಬೆನ್ನಲ್ಲೆ ಫ್ರಾನ್ಸ್‌ನ ನೂತನ ಪ್ರಧಾನಿ ರಾಜೀನಾಮೆ! ಕಾರಣವೇನು?

Ranji Trophy 2025: ಕರ್ನಾಟಕ ತಂಡ ಪ್ರಕಟ, ಕನ್ನಡಿಗ Mayank Agarwal ಗೆ ಮತ್ತೆ ಸಾರಥ್ಯ!

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)

SCROLL FOR NEXT