ನಿರ್ಮಲಾ ಸೀತಾರಾಮನ್( ಸಂಗ್ರಹ ಚಿತ್ರ) online desk
ದೇಶ

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಮಾತನಾಡಿದ ಸೀತಾರಾಮನ್ ಅವರು, ಕೃತಕ ಬುದ್ಧಿಮತ್ತೆ(AI), ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ತಮ್ಮ ಹಲವಾರು ಡೀಪ್‌ಫೇಕ್ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿಕೊಂಡಿದ್ದು, ಜನರ ನಂಬಿಕೆ ಉಳಿಸಿಕೊಳ್ಳಲು ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.

ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಮಾತನಾಡಿದ ಸೀತಾರಾಮನ್ ಅವರು, ಕೃತಕ ಬುದ್ಧಿಮತ್ತೆ, ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.

"ನಾವೀನ್ಯತೆಗೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಗಾಗಿ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್‌ಫೇಕ್ ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಲು ಕುಶಲತೆಯಿಂದ ಬಳಸುವುದನ್ನು ನಾನು ನೋಡಿದ್ದೇನೆ ಎಂದು" ಎಂದು ಅವರು ಹೇಳಿದ್ದಾರೆ.

ಅಂತವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಬೇಕಾದ "ತುರ್ತು" ಅಗತ್ಯ ಇದೆ. "ಹೊಸ ಪೀಳಿಗೆಯ ವಂಚನೆಯು ಫೈರ್‌ವಾಲ್‌ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್‌ಟೆಕ್ ನಾವೀನ್ಯಕಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ