ದೇಶ

Konaseema ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ಮಾಲೀಕ ಸೇರಿ 6 ಮಂದಿ ಸಾವು, ಹಲವರಿಗೆ ಗಂಭೀರ ಗಾಯ; Video

ಪಟಾಕಿ ಕಾರ್ಖಾನೆ ಮಾಲೀಕ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕ ಪ್ರಕಾಶಬಂಟಲ ಸತ್ಯಮೂರ್ತಿ ಎಂಬುವವರು ಅಲ್ಲಿಯೇ ಇದ್ದರು ಎನ್ನಲಾಗಿದೆ.

ಅಮರಾವತಿ: ಆಂಧ್ರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರ ಪ್ರದೇಶದ ಕೋನಸೀಮ ಜಿಲ್ಲೆಯ ರಾಯವರಂನಲ್ಲಿರುವ ಶ್ರೀ ಗಣಪತಿ ಗ್ರ್ಯಾಂಡ್ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದ್ದು, ಪ್ರಬಲ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

ಅಂತೆಯೇ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಶಿಕ್ಷಣ ಸಚಿವ ನಾರಾ ಲೋಕೇಶ್ ಈ ಘಟನೆಯನ್ನು ತೀವ್ರ ದುಃಖಕರ ಎಂದು ಬಣ್ಣಿಸಿದ್ದು, ಸರ್ಕಾರ ಈಗಾಗಲೇ ತನಿಖೆ ಆರಂಭಿಸಿದೆ ಎಂದು ತಿಳಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಮತ್ತು ಸರ್ಕಾರವು ಸಂತ್ರಸ್ತರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ.

ವೈಎಸ್‌ಆರ್‌ಸಿಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ದುರಂತದ ಬಗ್ಗೆ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಸಂತ್ರಸ್ಥ ಕುಟುಂಬಗಳಿಗೆ ಉದಾರ ಬೆಂಬಲ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಅಪಘಾತದಲ್ಲಿ ಗಾಯಗೊಂಡವರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪಟಾಕಿ ಕಾರ್ಖಾನೆ ಮಾಲೀಕ ಕೂಡ ಸಾವು

ಇನ್ನು ಈ ದುರ್ಘಟನೆಯಲ್ಲಿ ಪಟಾಕಿ ಕಾರ್ಖಾನೆ ಮಾಲೀಕ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕ ಪ್ರಕಾಶಬಂಟಲ ಸತ್ಯಮೂರ್ತಿ ಎಂಬುವವರು ಅಲ್ಲಿಯೇ ಇದ್ದರು ಎನ್ನಲಾಗಿದೆ.

ಮತ್ತೊಂದೆಡೆ ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಶಾಸಕ ಕಪ್ಪುಮಿಲ್ಲಿ ರಾಮಕೃಷ್ಣಾರೆಡ್ಡಿ ಅಲ್ಲಿಗೆ ಆಗಮಿಸಿ ಪರಿಶೀಲಿಸಿದರು. ನಂತರ ಮಾತನಾಡಿದ ಶಾಸಕರು "ಪೂರ್ವಗೋದಾವರಿ, ಕೋನಸೀಮ ಜಿಲ್ಲೆಗಳ ಗಡಿಯಲ್ಲಿ ಈ ಘಟನೆ ನಡೆದಿದೆ.

ಶ್ರೀ ಲಕ್ಷ್ಮೀ ಗಣಪತಿ ಫೈರ್ ವರ್ಕ್ಸ್ ಮಾಲೀಕರಾದ ಬಂಟ್ಲ ಸತ್ಯಮೂರ್ತಿ ಅವರು ಕಳೆದ 70 ವರ್ಷಗಳಿಂದ ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದರು. ಅವರು ದುರಂತದಲ್ಲಿ ಸಾವನ್ನಪ್ಪಿರುವುದು ಆಘಾತ ತಂದಿದೆ. ಯಮಾವಳಿಗಳನ್ನು ನಿಖರವಾಗಿ ಪಾಲಿಸಿದ್ದಾರೆ ಎಂದು ಇತ್ತೀಚೆಗೆ ಅಧಿಕಾರಿಗಳು ಪರಿಶೀಲಿಸಿದರು. ಆದರೂ ಇಂತಹ ಘಟನೆ ನಡೆಯುವುದು ನೋವುಂಟುಮಾಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಶಾಂತಿ ಸೂತ್ರಕ್ಕೆ ಹಮಾಸ್ ಒಪ್ಪಿಗೆ: ಒತ್ತೆಯಾಳುಗಳು ಸೋಮವಾರ ವಾಪಸ್ ಎಂದ ಟ್ರಂಪ್, ಕದನ ವಿರಾಮ ಘೋಷಣೆ ಬಳಿಕವೂ ಇಸ್ರೇಲ್‌ನಿಂದ ಮುಂದುವರೆದ ದಾಳಿ..!

Israel-Gaza ಯುದ್ಧ ಕೊನೆಗೂ ಅಂತ್ಯ: ಶಾಂತಿ ಒಪ್ಪಂದದ ಮೊದಲ ಹಂತಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ, ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ

ಕುರುಬರಿಗೆ ಎಸ್‌ಟಿ ಮೀಸಲಾತಿ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?

'Bigg boss' ಮನೆ ರೀ ಓಪನ್: ರೆಸಾರ್ಟ್​​ನಿಂದ 'ಜಾಲಿವುಡ್'ಗೆ ಮರಳಿದ ಸ್ಪರ್ಧಿಗಳು, ಆಟ ಮತ್ತೆ ಶುರು

20 ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌: ಫಾರ್ಮಾ ಕಂಪನಿಯ ಮಾಲೀಕ ಅರೆಸ್ಟ್

SCROLL FOR NEXT