ಅಮಿತ್ ಶಾ 
ದೇಶ

ಸ್ವದೇಶಿ ಮಂತ್ರ: Gmail ನಿಂದ Zoho Mailಗೆ ಅಮಿತ್ ಶಾ ಶಿಫ್ಟ್; ಟ್ರಂಪ್‌ಗೆ ಠಕ್ಕರ್

ಇದು ಅಮೆರಿಕದೊಂದಿಗೆ ಹೆಚ್ಚುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಡುವೆ ಕೇಂದ್ರ ಸರ್ಕಾರ ನಡೆಸುತ್ತಿರುವ 'ಸ್ವದೇಶಿ' ತಂತ್ರಜ್ಞಾನದ ಪ್ರಗತಿಯಲ್ಲಿ ಮತ್ತೊಂದು ಹೆಜ್ಜೆಯಾಗಿದೆ.

ನವದೆಹಲಿ: ಸ್ವದೇಶಿಗೆ ಹೆಚ್ಚು ಒತ್ತುಕೊಡುತ್ತಿರುವ ಸಂದರ್ಭದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ವಿದೇಶಿ Gmailಗೆ ಗುಡ್ ಬೈ ಹೇಳಿ, ಸ್ವದೇಶಿ ಇಮೇಲ್ ಸೇವೆ ಜೊಹೊ ಮೇಲ್‌ಗೆ ಶಿಫ್ಟ್ ಆಗಿದ್ದಾರೆ.

ಇದು ಅಮೆರಿಕದೊಂದಿಗೆ ಹೆಚ್ಚುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಡುವೆ ಕೇಂದ್ರ ಸರ್ಕಾರ ನಡೆಸುತ್ತಿರುವ 'ಸ್ವದೇಶಿ' ತಂತ್ರಜ್ಞಾನದ ಪ್ರಗತಿಯಲ್ಲಿ ಮತ್ತೊಂದು ಹೆಜ್ಜೆಯಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅಮಿತ್ ಶಾ ಅವರು, ತಮ್ಮ ಹೊಸ ಅಧಿಕೃತ ಇಮೇಲ್ ವಿಳಾಸ amitshah.bjp@zohomail.in ಅನ್ನು ಹಂಚಿಕೊಂಡಿದ್ದಾರೆ.

"ನಾನು ಜೊಹೊ ಮೇಲ್‌ಗೆ ಬದಲಾಯಿಸಿದ್ದೇನೆ. ಮುಂದಿನ ಎಲ್ಲಾ ಸಂವಹನ ಇದೇ ಇಮೇಲ್ ಮೂಲಕ ನಡೆಯಲಿದೆ. ದಯವಿಟ್ಟು ಎಲ್ಲರೂ ಈ ಇಮೇಲ್ ವಿಳಾಸ ಬಳಸಿ. ನಿಮ್ಮ ಗಮನ ಈ ಕಡೆ ನೀಡಿದ್ದಕ್ಕೆ ಧನ್ಯವಾದಗಳು'' ಎಂದು ಅಮಿತ್ ಶಾ ಬರೆದುಕೊಂಡಿದ್ದಾರೆ.

ಈ ಘೋಷಣೆಯು ಕೇಂದ್ರದ ಆತ್ಮನಿರ್ಭರ ಭಾರತ್ ದೃಷ್ಟಿಕೋನಕ್ಕೆ ಹೊಂದಿಕೆಯಾದರೂ, ಅಮಿತ್ ಶಾ ಅವರ ಈ ದಿಢೀರ್ ನಿರ್ಧಾರದ ಬಗ್ಗೆ ಆನ್‌ಲೈನ್‌ನಲ್ಲಿ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಗೃಹ ಸಚಿವರ ಈ ನಡೆಯನ್ನು ಜೊಹೊ ಸಹ-ಸಂಸ್ಥಾಪಕ ಶ್ರೀಧರ್ ವೆಂಬು ಅವರು ತಕ್ಷಣ ಸ್ವಾಗತಿಸಿದ್ದು, ಇದು ಭಾರತದ ತಂತ್ರಜ್ಞಾನ ಪರಿಸರ ವ್ಯವಸ್ಥೆಗೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.

ಟ್ರಂಪ್‌ಗೆ ಅಮಿತ್ ಶಾ ಠಕ್ಕರ್

ಅಮಿತ್ ಶಾ ಅವರು ಇಂದು ಮಾಡಿರುವ ಪೋಸ್ಟ್ ನ ಕೊನೆಯಲ್ಲಿ ನಿಮ್ಮ ಗಮನ ಈ ಕಡೆ ನೀಡಿದ್ದಕ್ಕೆ ಧನ್ಯವಾದಗಳು'' ಎಂದು ಹೇಳುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಠಕ್ಕರ್ ನೀಡಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರು ತಮ್ಮ ಭಾಷಣದ ಕೊನೆಯಲ್ಲಿ ಯಾವಾಗಲೂ 'Thank you for your kind attention to this matter' ಎಂದು ಹೇಳ್ತಾರೆ. ಇದೀಗ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದೇ ವಾಕ್ಯವನ್ನು ಉಲ್ಲೇಖಿಸಿದ್ದಾರೆ. ಅದರರ್ಥ, ಭಾರತ ಮೂಲದ ಜೋಹೋ, ಜಿಮೇಲ್ ಮತ್ತು ಮೈಕ್ರೋಸಾಫ್ಟ್ ಔಟ್‌ಲುಕ್‌ಗೆ ಠಕ್ಕರ್ ಕೊಡಲಿದೆ ಅನ್ನೋ ಅರ್ಥದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ