ಪ್ರಧಾನಿ ನರೇಂದ್ರ ಮೋದಿ ಅವರು ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ 
ದೇಶ

ಇಂದು ಪ್ರಧಾನಿ ಮೋದಿಯಿಂದ Navi Mumbai airport, ಮೆಟ್ರೋ ಮಾರ್ಗ ಉದ್ಘಾಟನೆ, ಯುಕೆ ಪ್ರಧಾನಿ ಭೇಟಿ

ಭಾರತ ಯುಕೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಪ್ರಕ್ರಿಯೆಯ ಭಾಗವಾಗಿ ಮೋದಿ ಅವರು ಮುಂಬೈನಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಲಿದ್ದಾರೆ.

ಬುಧವಾರದಿಂದ ಆರಂಭವಾಗುವ ಎರಡು ದಿನಗಳ ಮಹಾರಾಷ್ಟ್ರ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತ ಮತ್ತು ಮುಂಬೈ ಮೆಟ್ರೋ ಮಾರ್ಗ -3 ರ ಅಂತಿಮ ಹಂತವನ್ನು ಉದ್ಘಾಟಿಸಲಿದ್ದಾರೆ.

11 ಸಾರ್ವಜನಿಕ ಸಾರಿಗೆ ನಿರ್ವಾಹಕರಿಗಾಗಿ ಭಾರತದ ಮೊದಲ ಸಂಯೋಜಿತ ಸಾಮಾನ್ಯ ಚಲನಶೀಲತೆ ಅಪ್ಲಿಕೇಶನ್ ಮುಂಬೈ ಒನ್ ನ್ನು ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇಂಗ್ಲೆಂಡ್ ಪ್ರಧಾನಿ ಆಗಮನ

ಭಾರತ ಯುಕೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಪ್ರಕ್ರಿಯೆಯ ಭಾಗವಾಗಿ ಮೋದಿ ಅವರು ಮುಂಬೈನಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಲಿದ್ದಾರೆ. ಅವರು ನಗರದಲ್ಲಿ ನಡೆಯುವ ಸಿಇಒ ಫೋರಂ ಮತ್ತು ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನ 6 ನೇ ಆವೃತ್ತಿಯಲ್ಲಿ ಭಾಗವಹಿಸಲಿದ್ದಾರೆ.

ಇಂದು ನವಿ ಮುಂಬೈ ತಲುಪಿದ ನಂತರ, ಮೋದಿ ಹೊಸದಾಗಿ ನಿರ್ಮಿಸಲಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವೀಕ್ಷಿಸಲಿದ್ದಾರೆ. ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಮುಂಬೈನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೊದಲ ಹಂತ ಉದ್ಘಾಟನೆ

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (NMIA) ಮೊದಲ ಹಂತವನ್ನು 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದು ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯಾಗಿದ್ದು, ಇದನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಮುಂಬೈ ಮಹಾನಗರ ಪ್ರದೇಶದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ, NMIA ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (CSMIA) ದೊಂದಿಗೆ ಒಟ್ಟಾಗಿ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಮುಂಬೈಯನ್ನು ಜಾಗತಿಕ ಬಹು-ವಿಮಾನ ನಿಲ್ದಾಣ ವ್ಯವಸ್ಥೆಗಳ ಲೀಗ್‌ಗೆ ಏರಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಚಾರ್ಯ ಅತ್ರೆ ಚೌಕ್ ನಿಂದ ಕಫೆ ಪರೇಡ್ ವರೆಗೆ 12,200 ರೂಪಾಯಿ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮುಂಬೈ ಮೆಟ್ರೋ ಲೈನ್ -3 ರ ಹಂತ 2 ಬಿ ನ್ನು ಮೋದಿ ಉದ್ಘಾಟಿಸಲಿದ್ದಾರೆ.

ನಗರದ ನಗರ ಸಾರಿಗೆ ಪರಿವರ್ತನೆಯಲ್ಲಿ ಪ್ರಮುಖ ಮೈಲಿಗಲ್ಲು ಗುರುತಿಸುವ 37,270 ಕೋಟಿ ರೂಪಾಯಿ ವೆಚ್ಚದ ಮುಂಬೈ ಮೆಟ್ರೋ ಲೈನ್ 3 (ಆಕ್ವಾ ಲೈನ್) ನ್ನು ಅವರು ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ ಎಂದು ಅದು ಹೇಳಿದೆ.

ಬಹು ಸಾರ್ವಜನಿಕ ಸಾರಿಗೆ ನಿರ್ವಾಹಕರಲ್ಲಿ ಸಂಯೋಜಿತ ಮೊಬೈಲ್ ಟಿಕೆಟಿಂಗ್ ಸೇರಿದಂತೆ ಪ್ರಯಾಣಿಕರಿಗೆ ಹಲವಾರು ಪ್ರಯೋಜನಗಳನ್ನು ನೀಡುವ ಮುಂಬೈ ಒನ್ ಅಪ್ಲಿಕೇಶನ್ ನ್ನು ಮೋದಿ ಬಿಡುಗಡೆ ಮಾಡಲಿದ್ದಾರೆ.

ಮಹಾರಾಷ್ಟ್ರದಲ್ಲಿ ಕೌಶಲ್ಯ, ಉದ್ಯೋಗ, ಉದ್ಯಮಶೀಲತೆ ಮತ್ತು ನಾವೀನ್ಯತೆ ಇಲಾಖೆಯ ಅಲ್ಪಾವಧಿಯ ಉದ್ಯೋಗಾವಕಾಶ ಕಾರ್ಯಕ್ರಮ (STEP) ಉಪಕ್ರಮವನ್ನು ಅವರು ಉದ್ಘಾಟಿಸಲಿದ್ದಾರೆ.

ಉದ್ಯೋಗಾವಕಾಶವನ್ನು ಹೆಚ್ಚಿಸಲು ಕೈಗಾರಿಕಾ ಅವಶ್ಯಕತೆಗಳೊಂದಿಗೆ ಕೌಶಲ್ಯ ಅಭಿವೃದ್ಧಿಯನ್ನು ಜೋಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿ 400 ಸರ್ಕಾರಿ ಐಟಿಐಗಳು ಮತ್ತು 150 ಸರ್ಕಾರಿ ತಾಂತ್ರಿಕ ಪ್ರೌಢಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು.

ಭದ್ರತೆ ಹೆಚ್ಚಳ

ಸ್ಥಳೀಯ ಪೊಲೀಸರಲ್ಲದೆ, ವಿಶೇಷ ರಕ್ಷಣಾ ಗುಂಪು (SPG), ವಿಶೇಷ ರಕ್ಷಣಾ ಘಟಕ (SPU), ಬಾಂಬ್ ನಿಷ್ಕ್ರಿಯ ದಳ (BDS) ಮತ್ತು ಸಂಚಾರ ಪೊಲೀಸರನ್ನು ಭದ್ರತಾ ವ್ಯವಸ್ಥೆಯ ಭಾಗವಾಗಿ ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ: ಗಂಗಮ್ಮ ದೇವಿ ವಿಗ್ರಹದ ಮೇಲೆ ಕಾಲಿಟ್ಟು ಮಹಿಳೆಯರ ಸ್ನಾನ, Video ವೈರಲ್!

Konaseema ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ಮಾಲೀಕ ಸೇರಿ ಕನಿಷ್ಠ 7 ಸಾವು, ಹಲವರಿಗೆ ಗಂಭೀರ ಗಾಯ

ಮೊದಲು 60 ಕೋಟಿ ಠೇವಣಿಯಿಡಿ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿದೇಶ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ನಿರ್ಬಂಧ!

ಪಾಕಿಸ್ತಾನದಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ Pakistan ಲೆಫ್ಟಿನೆಂಟ್ ಕರ್ನಲ್, ಮೇಜರ್ ಸೇರಿದಂತೆ 11 ಪಾಕ್ ಸೈನಿಕರ ಹತ್ಯೆ

SCROLL FOR NEXT