ಪ್ರಶಾಂತ್ ಕಿಶೋರ್ 
ದೇಶ

Bihar polls: ಜನ್ ಸೂರಾಜ್ ಪಕ್ಷದ 51 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಪ್ರಶಾಂತ್ ಕಿಶೋರ್ ಎಲ್ಲಿಂದ ಕಣಕ್ಕೆ?

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಕ್ಷೇತ್ರವಾದ ರಾಘೋಪುರದಿಂದ ಅಕ್ಟೋಬರ್ 11 ರಂದು ಕಿಶೋರ್ ಪ್ರಚಾರ ಆರಂಭಿಸುವ ಸಾಧ್ಯತೆಯಿದೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ 51 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನ್ ಸೂರಾಜ್ ಪಕ್ಷ ಗುರುವಾರ ಬಿಡುಗಡೆ ಮಾಡಿದೆ. ಆದರೆ ಅದರ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ಖಚಿತಪಡಿಸಿಲ್ಲ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಉದಯ್ ಸಿಂಗ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಕ್ಷೇತ್ರವಾದ ರಾಘೋಪುರದಿಂದ ಅಕ್ಟೋಬರ್ 11 ರಂದು ಕಿಶೋರ್ ಪ್ರಚಾರ ಆರಂಭಿಸುವ ಸಾಧ್ಯತೆಯಿದೆ ಎಂದು ಹೇಳಿದರು.

ಶೀಘ್ರದಲ್ಲೇ ಇತರ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಪಟ್ಟಿಯಲ್ಲಿ ಕಿಶೋರ್ ಅವರ ಹೆಸರಿದ್ದರೆ ಖಂಡಿತ ಅವರು ಸ್ಪರ್ಧಿಸುತ್ತಾರೆ. ಇದು ಸ್ಪಷ್ಟವಾಗಿದೆ. ಅವರು ಅಕ್ಟೋಬರ್ 11 ರಂದು ರಾಘೋಪುರದಿಂದ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುತ್ತಾರೆ ಎಂದು ಸಿಂಗ್ ಹೇಳಿದರು.

ಪಕ್ಷ ಪ್ರಕಟಿಸಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಜನಪ್ರಿಯ ಭೋಜ್‌ಪುರಿ ಗಾಯಕ ರಿತೇಶ್ ರಂಜನ್ ಪಾಂಡೆ ಅವರು ಕಾರ್ಗಹಾರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಮತ್ತು ತೃತೀಯ ಲಿಂಗ ಸಮುದಾಯದಿಂದ ಪ್ರಿತ್ತಿ ಕಿನ್ನರ್ ಅವರು ಗೋಪಾಲ್‌ಗಂಜ್‌ನ ಭೋರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್