ಪಾಟ್ನಾ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಸರ್ಕಾರ ರಚಿಸಿದರೆ ರಾಜ್ಯದ ಪ್ರತಿ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಆರ್ ಜೆಡಿ ಈಗಾಗಲೇ ಪ್ರಚಾರ ಆರಂಭಿಸಿದ್ದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವಿ ಯಾದವ್, ಸರ್ಕಾರ ರಚನೆಯಾದ 20 ದಿನಗಳಲ್ಲಿ ಈ ಉದ್ಯೋಗ ಖಾತ್ರಿಗೆ ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಅಧಿಕಾರ ವಹಿಸಿಕೊಂಡ 20 ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ಆರ್‌ಜೆಡಿ ನಾಯಕ ಹೇಳಿದರು.
ನಮ್ಮ ಸರ್ಕಾರ ಪ್ರತಿ ಮನೆಯಲ್ಲಿ ಕನಿಷ್ಠ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದನ್ನು ಖಚಿತಪಡಿಸುತ್ತದೆ. ಸರ್ಕಾರ ರಚನೆಯಾದ 20 ದಿನಗಳಲ್ಲಿ ನಾವು ಹೊಸ ಕಾಯಿದೆಯನ್ನು ಪ್ರಕಟಿಸುತ್ತೇವೆ ಮತ್ತು 20 ತಿಂಗಳಲ್ಲಿ ಎಲ್ಲಾ ಮನೆಗಳಲ್ಲಿ ಸರ್ಕಾರಿ ಉದ್ಯೋಗಸ್ಥರು ಇರುವಂತೆ ಮಾಡಲಾಗುವುದು ಎಂದು ತಿಳಿಸಿದರು.