ಸಾಂದರ್ಭಿಕ ಚಿತ್ರ  
ದೇಶ

ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಪಾಕಿಸ್ತಾನ ಡ್ರೋನ್ ಪತ್ತೆ: ಭದ್ರತಾ ಪಡೆಗಳಿಂದ ತೀವ್ರ ಶೋಧ

ನಿನ್ನೆ ತಡರಾತ್ರಿ ಘಗ್ವಾಲ್ ಪ್ರದೇಶದ ಚಲ್ಲಿಯಾರಿ ಗ್ರಾಮ ಮತ್ತು ರಾಮಗಢದ ಚಮ್ಲಿಯಾಲ್ ಗ್ರಾಮದ ಮೇಲೆ ಡ್ರೋನ್‌ಗಳು ಕಾಣಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಂಬಾ/ಜಮ್ಮು: ಜಮ್ಮು- ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಇರುವ ಹಳ್ಳಿಗಳ ಮೇಲೆ ಪಾಕಿಸ್ತಾನದ ಎರಡು ಡ್ರೋನ್‌ಗಳು ಸುಳಿದಾಡುತ್ತಿರುವುದು ಕಂಡುಬಂದು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ತಡರಾತ್ರಿ ಘಗ್ವಾಲ್ ಪ್ರದೇಶದ ಚಲ್ಲಿಯಾರಿ ಗ್ರಾಮ ಮತ್ತು ರಾಮಗಢದ ಚಮ್ಲಿಯಾಲ್ ಗ್ರಾಮದ ಮೇಲೆ ಡ್ರೋನ್‌ಗಳು ಕಾಣಿಸಿಕೊಂಡಿವೆ.

ಗಡಿ ಭದ್ರತಾ ಪಡೆ (BSF) ಎರಡೂ ಪ್ರದೇಶಗಳನ್ನು ಸುತ್ತುವರೆದಿದ್ದು, ಇಂದು ಮುಂಜಾನೆ ಪೊಲೀಸರೊಂದಿಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಗಡಿಯ ಈ ಭಾಗದಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಅಥವಾ ಮಾದಕವಸ್ತುಗಳು ಪಾಕಿಸ್ತಾನ ಕಡೆಯಿಂದ ಬೀಳದಂತೆ ನೋಡಿಕೊಳ್ಳುತ್ತಿದೆ.

ಶೋಧ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ