ಸಿಇಸಿ ಸಭೆ ಹಾಗೂ ನಿತೀಶ್ ಕುಮಾರ್ ಸಾಂದರ್ಭಿಕ ಚಿತ್ರ 
ದೇಶ

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ಹಂಚಿಕೊಂಡಿದ್ದಾರೆ.

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಗೆ ಎನ್ ಡಿಎ ಸೀಟು ಹಂಚಿಕೆಯನ್ನು ಭಾನುವಾರ ಅಂತಿಮಗೊಳಿಸಿದೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎನ್ ಡಿಎ ಮಿತ್ರಪಕ್ಷಗಳಾದ ಬಿಜೆಪಿ, ಜೆಡಿಯು, ಎಲ್ ಜೆಪಿ (ಆರ್) ಆರ್ ಎಲ್ ಎಂ ಮತ್ತು ಹೆಚ್ ಎಎಂ ನಡುವಿನ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಯಿತು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ಹಂಚಿಕೊಂಡಿದ್ದಾರೆ.

ಬಿಜೆಪಿ ಹಾಗೂ ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (LJP R) 29 ಸೀಟುಗಳನ್ನು ಪಡೆದುಕೊಂಡಿದೆ. ಉಳಿದಂತೆ ರಾಷ್ಟ್ರೀಯ ಲೋಕ ಸಮತಾ ಪಕ್ಷ( RLM) ಆರು ಸ್ಥಾನಗಳಲ್ಲಿ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚ್ (HAM) 6 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ ಎಂದು ತಿಳಿಸಿದ್ದಾರೆ.

ಬಿಹಾರ ಮತ್ತೆ ಎನ್ ಡಿಎ ಸರ್ಕಾರಕ್ಕೆ ಸಜ್ಜಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳುವ ಮೂಲಕ ಸೀಟು ಹಂಚಿಕೆ ಸೂತ್ರವನ್ನು ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ

CM ಕುರ್ಚಿಗಾಗಿ ಬಣ ಬಡಿದಾಟ: ಸಿದ್ದರಾಮಯ್ಯ vs ಡಿಕೆಶಿ 'ಹೈಡ್ರಾಮ' ಈಗ ದೆಹಲಿಗೆ ಶಿಫ್ಟ್, ಎಲ್ಲರ ಚಿತ್ತ ಹೈಕಮಾಂಡ್ ನತ್ತ!

ಹವಾಯಿ ದ್ವೀಪದಲ್ಲಿ ಮತ್ತೆ ಸ್ಫೋಟಿಸಿದ ಜ್ವಾಲಾಮುಖಿ: ಬರೊಬ್ಬರಿ 400 ಅಡಿ ಎತರಕ್ಕೆ ಚಿಮ್ಮಿದ ಲಾವಾರಸ, ರಣರೋಚಕ ವಿಡಿಯೋ

'ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ಕೆಳಗಿಳಿಸಿದರೆ ನಿಮಗೇ ಅಪಾಯ': ಕಾಂಗ್ರೆಸ್ ಗೆ ಅಹಿಂದ ಸಮುದಾಯಗಳ ಖಡಕ್ ಎಚ್ಚರಿಕೆ

ಎಕ್ಸ್ ಪ್ರೆಸ್ ರೈಲು ಸಂಚರಿಸುತ್ತಿದ್ದ ವೇಳೆಯೇ ಸೇತುವೆಯಿಂದ ಹಳಿಗೆ ಬಿದ್ದ ಟ್ರಕ್; ತಪ್ಪಿದ ದೊಡ್ಡ ಅನಾಹುತ

SCROLL FOR NEXT