ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಕುಪ್ವಾರಾದಲ್ಲಿ ಒಳನುಸುಳುವಿಕೆ ಯತ್ನ; ಭದ್ರತಾ ಪಡೆಗಳಿಂದ ಇಬ್ಬರು ಭಯೋತ್ಪಾದಕರ ಹತ್ಯೆ

ಸೋಮವಾರ ರಾತ್ರಿ ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪಾದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು, ದಾಳಿ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪಾದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು, ದಾಳಿ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

2025ರ ಅಕ್ಟೋಬರ್ 13ರಂದು ಗಡಿಯಲ್ಲಿ ಒಳನುಸುಳುವ ಪ್ರಯತ್ನ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೈನ್ಯ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕುಪ್ವಾರದ ಮಚ್ಚಲ್ ವಲಯದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದೆ.

ಅನುಮಾನಾಸ್ಪದ ಚಟುವಟಿಕೆಗಳು ಕಂಡ ಕೂಡಲೇ ಭದ್ರತಾ ಪಡೆಗಳು ಅವರನ್ನು ಹಿಮ್ಮೆಟ್ಟಿಸಿವೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತ್ಯುತ್ತರ ನೀಡಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಅವರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀನಗರ ಮೂಲದ ಚಿನಾರ್ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಈ ಚಳಿಗಾಲದಲ್ಲಿ ಭಾರೀ ಹಿಮಪಾತದಿಂದಾಗಿ ಪರ್ವತ ಪ್ರವೇಶ ಮುಚ್ಟುವ ಮೊದಲು, ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಯಾವುದೇ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲು ಸೇನೆಯು ಭದ್ರತಾ ಪಡೆಗಳೊಂದಿಗೆ 24/7 ಜಾಗರೂಕತೆಯಿಂದ ಕಾರ್ಯನಿರ್ವಹಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಟ್ರಂಪ್ ಗೇ ಠಕ್ಕರ್: ವಿರೋಧದ ನಡುವೆಯೇ ಭಾರತದಲ್ಲಿ ಗೂಗಲ್ ಭಾರಿ ಹೂಡಿಕೆ, ಪ್ರಧಾನಿ ಮೋದಿಗೆ ಸುಂದರ್ ಪಿಚೈ ವಿವರಣೆ!

ಟ್ರಂಪ್‌ರನ್ನು Pak PM ಹೊಗಳುತ್ತಿದ್ದಾಗ ಹಿಂದೆ ನಿಂತಿದ್ದ Italy ಪ್ರಧಾನಿ ಜಾರ್ಜಿಯಾ ಮೆಲೋನಿ ರಿಯಾಕ್ಷನ್ Video Viral!

ರಾಜ್ಯದ ಕೈತಪ್ಪಿದ ₹10,000 ಕೋಟಿ ಆದಾಯ, 30,000 ಉದ್ಯೋಗ! Goggle AI Data Centre ಯೋಜನೆ ಆಂಧ್ರಪ್ರದೇಶದ ಪಾಲು!

ರಾಜ್ಯ ಸರ್ಕಾರಕ್ಕೆ ಶಾಕ್: ಐಪಿಸಿ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆ ರದ್ದು!

ಬೇಗ ಹೋಗು, ನನ್ನ ಉಳಿಸಿಕೊಡು: ರಾಜು ತಾಳಿಕೋಟೆಯ ಕೊನೆಯ 6 ನಿಮಿಷದ ಘಟನೆ ವಿವರಿಸಿದ Biggboss ವಿಜೇತ ಶೈನ್ ಶೆಟ್ಟಿ!

SCROLL FOR NEXT