ನಿತೀಶ್ ಕುಮಾರ್ 
ದೇಶ

ಬಿಹಾರ ವಿಧಾನಸಭೆ ಚುನಾವಣೆ: JDU ಮೊದಲ ಲಿಸ್ಟ್ ರಿಲೀಸ್; 5 ಸಚಿವರು ಸೇರಿ 51 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಳಿದ ಕ್ಷೇತ್ರಗಳನ್ನು ಮೈತ್ರಿಕೂಟದ ಇತರ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ.

ಪಾಟ್ನಾ: ಸೀಟು ಹಂಚಿಕೆ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ ಸಚಿವರಾದ ಶ್ರವಣ್ ಕುಮಾರ್, ವಿಜಯ್ ಕುಮಾರ್ ಚೌಧರಿ ಮತ್ತು ಮಹೇಶ್ವರ್ ಹಜಾರಿ ಸೇರಿದಂತೆ 51 ಅಭ್ಯರ್ಥಿಗಳ ಹೆಸರುಗಳು ಸೇರಿವೆ. ಜೆಡಿಯು ಟಿಕೆಟ್‌ನಲ್ಲಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಅನಂತ್ ಸಿಂಗ್ ಕೂಡ ಸೇರಿದ್ದಾರೆ. ಸೀಟು ಹಂಚಿಕೆ ಸಂಬಂಧ ಎನ್‌ಡಿಎ ಮೈತ್ರಿಯಲ್ಲಿ ಅಪಸ್ವರ ಎದ್ದಿರುವ ನಡುವೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಳಿದ ಕ್ಷೇತ್ರಗಳನ್ನು ಮೈತ್ರಿಕೂಟದ ಇತರ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ. ಎಲ್‌ಜೆಪಿ (ರಾಮ್ ವಿಲಾಸ್) 29, ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಪಕ್ಷಗಳಿಗೆ ತಲಾ ಆರು ಸ್ಥಾನಗಳನ್ನು ನೀಡಲಾಗಿದೆ. ಆದರೆ ಸೀಟು ಹಂಚಿಕೆ ಬಗ್ಗೆ ಎಚ್‌ಎಎಂ ಹಾಗೂ ಆರ್‌ಎಲ್‌ಎಂ ಪಕ್ಷಗಳ ನಾಯಕರು ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚುನಾವಣಾ ಪ್ರಚಾರವು ಅ.16ರಂದು ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gujarat: ಒಂದು ಕಾಲದ ಬಿಜೆಪಿ ವಿರೋಧಿಗಳಿಗೆ ಒಲಿದ ಸಚಿವ ಸ್ಥಾನ?: ನೂತನ ಸಂಪುಟದಲ್ಲಿ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಟೇಲ್!

ಸಂಸತ್ ಸದಸ್ಯರಿಂದ ಇಂತಹ ಹೇಳಿಕೆ "ಸರಿಯಲ್ಲ": ಸುಧಾ ಮೂರ್ತಿ ನಿರ್ಧಾರಕ್ಕೆ ಪ್ರಿಯಾಂಕ್ ಖರ್ಗೆ ಬೇಸರ

HMT ಕಾರ್ಖಾನೆ ಪುನರುಜ್ಜೀವನಗೊಳಿಸಲು DPR ಸಿದ್ಧವಾಗುತ್ತಿದೆ: ಕುಮಾರಸ್ವಾಮಿ

RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ​​ ಮಹತ್ವದ ತೀರ್ಮಾನ!

ಜಾಗತಿಕ ಸೇನಾ ಬಲ: ಚೀನಾವನ್ನು ಹಿಂದಿಕ್ಕಿದ ಭಾರತ! ಅಮೆರಿಕ, ರಷ್ಯಾ ನಂತರ 3ನೇ ಅತಿ ಬಲಿಷ್ಠ ಸೇನೆ!

SCROLL FOR NEXT