ಬಿಜೆಪಿ (ಸಂಗ್ರಹ ಚಿತ್ರ) online desk
ದೇಶ

ಜಮ್ಮು, ಕಾಶ್ಮೀರ ಉಪಚುನಾವಣೆ: ಎರಡೂ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ಕಣಿವೆಯ ಬುದ್ಗಮ್ ಕ್ಷೇತ್ರಕ್ಕೆ ಅಗಾ ಸೈಯದ್ ಮೊಹ್ಸಿನ್ ಮತ್ತು ಜಮ್ಮುವಿನ ನಾಗ್ರೋಟಾ ಸ್ಥಾನದಿಂದ ದೇವಯಾನಿ ರಾಣಾ ಅವರನ್ನು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಸಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಕಣಿವೆಯ ಬುದ್ಗಮ್ ಕ್ಷೇತ್ರಕ್ಕೆ ಅಗಾ ಸೈಯದ್ ಮೊಹ್ಸಿನ್ ಮತ್ತು ಜಮ್ಮುವಿನ ನಾಗ್ರೋಟಾ ಸ್ಥಾನದಿಂದ ದೇವಯಾನಿ ರಾಣಾ ಅವರನ್ನು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಸಿದೆ.

ಎರಡು ಕಡೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬುದ್ಗಮ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಗಂಡರ್‌ಬಾಲ್ ಸ್ಥಾನವನ್ನು ಉಳಿಸಿಕೊಂಡಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಾಲಿ ಬಿಜೆಪಿ ಶಾಸಕ ದೇವೇಂದರ್ ಸಿಂಗ್ ರಾಣಾ ಅವರ ನಿಧನರಾದ ನಂತರ ಜಮ್ಮುವಿನ ನಾಗ್ರೋಟಾ ಸ್ಥಾನ ತೆರವಾಗಿತ್ತು. ತೆರವಾಗಿದ್ದ ಈ ಎರಡೂ ಕ್ಷೇತ್ರಗಳಿಗೆ ಈಗ ಚುನಾವಣೆ ನಡೆಯುತ್ತಿದೆ.

ದೇವಯಾನಿ ಅವರು ದೇವೇಂದರ್ ರಾಣಾ ಅವರ ಪುತ್ರಿಯಾಗಿದ್ದು, ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

2024ರ ವಿಧಾನಸಭಾ ಚುನಾವಣೆಯಲ್ಲಿ, ಬುದ್ಗಮ್ ಕ್ಷೇತ್ರದಲ್ಲಿ ಒಮರ್ ಅಬ್ದುಲ್ಲಾ ಅವರು ಪಿಡಿಪಿಯ ಅಗಾ ಸೈಯದ್ ಮುಂತಜಿರ್ ಮೆಹದಿ ಅವರ ವಿರುದ್ಧ 18,485 ಮತಗಳಿಂದ ಗೆಲುವು ಸಾಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video