ಮಗು (ಸಾಂಕೇತಿಕ ಚಿತ್ರ) online desk
ದೇಶ

1 ವರ್ಷದ ತನ್ನ ಮಗುವನ್ನು ಫ್ಯಾನ್ ಗೆ ನೇಣು ಬಿಗಿದ ಮಹಿಳೆ; ಬಂಧನ!

ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: 1 ವರ್ಷದ ತನ್ನ ಮಗುವನ್ನು ಮಹಿಳೆಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಸದರ್ ಕೊತ್ವಾಲಿ ಪ್ರದೇಶದಲ್ಲಿ ವರದಿಯಾಗಿದೆ.

ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖುಷ್ಬೂ ಎಂದು ಗುರುತಿಸಲಾದ ಆರೋಪಿ, ವೈವಾಹಿಕ ಕಲಹದ ನಂತರ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಳು ಮತ್ತು ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಸುಭಾಷ್ ನಗರದ ಕೋಣೆಯಲ್ಲಿ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಮಗುವನ್ನು ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿ ಕೊಂದಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ" ಎಂದು ಸರ್ಕಲ್ ಆಫೀಸರ್ (ಸದರ್) ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ. ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿ, ಮಗುವಿನ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿವೆ.

ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಖುಷ್ಬೂ ವಿವಾಹಿತಳಾಗಿದ್ದರೂ, ವೈವಾಹಿಕ ಕಲಹದಿಂದಾಗಿ ಸುಭಾಷ್ ನಗರದ ತನ್ನ ತಾಯಿಯ ಮನೆಯಲ್ಲಿ ಹಲವಾರು ತಿಂಗಳುಗಳಿಂದ ವಾಸಿಸುತ್ತಿದ್ದಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್