ರವಿ ನಾಯ್ಕ್ 
ದೇಶ

ಗೋವಾ ಕೃಷಿ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

ಪಣಜಿ: ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಹೃದಯಸ್ತಂಭನದಿಂದ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

79 ವರ್ಷದ ರವಿ ನಾಯ್ಕ್ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇನ್ನು ರವಿ ನಾಯ್ಕ್ ನಿಧನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ.

ರವಿ ನಾಯ್ಕ್ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್ ಸಾವಂತ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!