ಸಿಎಂ ನಿತೀಶ್ ಕುಮಾರ್ 
ದೇಶ

ಬಿಹಾರ ಚುನಾವಣೆ: JDUನ 44 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಗೆ ನಿನ್ನೆ 57 ಅಭ್ಯರ್ಥಿಗಳನ್ನು ಘೋಷಿಸಿದ್ದ ಜೆಡಿಯು ಇಂದು 44 ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ತನ್ನ ಪಾಲಿನ 101 ಅಭ್ಯರ್ಥಿಗಳ ಖೋಟಾವನ್ನು ಪೂರ್ಣಗೊಳಿಸಿದೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ(ಯುನೈಟೆಡ್) ಗುರುವಾರ 44 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಗೆ ನಿನ್ನೆ 57 ಅಭ್ಯರ್ಥಿಗಳನ್ನು ಘೋಷಿಸಿದ್ದ ಜೆಡಿಯು ಇಂದು 44 ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ತನ್ನ ಪಾಲಿನ 101 ಅಭ್ಯರ್ಥಿಗಳ ಖೋಟಾವನ್ನು ಪೂರ್ಣಗೊಳಿಸಿದೆ.

ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಪ್ರಧಾನ ಕಚೇರಿಯ ಉಸ್ತುವಾರಿ ಚಂದನ್ ಕುಮಾರ್ ಸಿಂಗ್ ಅವರು ಇಂದು 44 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಎರಡನೇ ಪಟ್ಟಿಯಲ್ಲಿ ನವಾಡಾ ಪ್ರಭಾವಿ ರಾಜ್ವಲ್ಲಭ್ ಪ್ರಸಾದ್ ಯಾದವ್ ಅವರ ಪತ್ನಿ ವಿಭಾ ದೇವಿ ಅವರು ಸ್ಥಾನ ಪಡೆದಿದ್ದಾರೆ. ಅವರು ನವಾಡಾ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.

ಮತ್ತೊಬ್ಬ ಗಮನಾರ್ಹ ಅಭ್ಯರ್ಥಿ ಚೇತನ್ ಆನಂದ್ ಮೋಹನ್ ಅವರ ಪುತ್ರ, ಔರಂಗಾಬಾದ್ ಜಿಲ್ಲೆಯ ನಬಿನಗರದಿಂದ ಸ್ಪರ್ಧಿಸುತ್ತಿದ್ದಾರೆ. ಅವರು ಈ ಹಿಂದೆ 2020ರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಟಿಕೆಟ್‌ನಲ್ಲಿ ಶಿಯೋಹರ್ ಸ್ಥಾನದಿಂದ ಸ್ಪರ್ಧಿಸಿ ಗೆದ್ದಿದ್ದರು ಮತ್ತು ಕಳೆದ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯ ಸಮಯದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬೆಂಬಲಿಸಿ ಬಹುಮಾನ ಪಡೆದಿದ್ದರು.

ಕೇಸರಿಯಾದಿಂದ ಶಾಲಿನಿ ಮಿಶ್ರಾ, ಬಾಬುಬರ್ಹಿಯಿಂದ ಮೀನಾ ಕಾಮತ್, ಶಿಯೋಹರ್‌ನಿಂದ ಶ್ವೇತಾ ಗುಪ್ತಾ, ಫುಲ್‌ಪಾರಸ್‌ನಿಂದ ಶೀಲಾ ಮಂಡಲ್, ಧಮ್‌ದಾಹಾದಿಂದ ಲೆಸಿ ಸಿಂಗ್, ಬೆಳಗಂಜ್‌ನಿಂದ ಮನೋರಮಾ ದೇವಿ, ತ್ರಿವೇಣಿಗಂಜ್‌ನಿಂದ ಸೋನಮ್ ರಾಣಿ ಸರ್ದಾರ್ ಮತ್ತು ಅರಾರಿಯಾದಿಂದ ಶಗುಫ್ತಾ ಅಜೀಮ್ ಸೇರಿದಂತೆ ಒಂಬತ್ತು ಮಹಿಳಾ ಅಭ್ಯರ್ಥಿಗಳನ್ನು ಜೆಡಿಯು ಕಣಕ್ಕಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!